ಮದಗದಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಕೋಟ, ಮೇ 15: ಬಿದ್ಕಲ್‌ಕಟ್ಟೆ ಸಮೀಪದ ಹುಣ್ಸೆಮಕ್ಕಿಯ ಮದಗದಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬ್ರಹ್ಮನಗರದ ನಿವಾಸಿ ರಾಮ ಮೊಗೇರ (31) ಎಂಬವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ರಾಮ ಮೊಗೇರ ರವಿವಾರ ರಜೆ ಇದ್ದ ಕಾರಣ ಮಧ್ಯಾಹ್ನ 3:30ರ ಸುಮಾರಿಗೆ ತನ್ನ ಸ್ನೇಹಿತರಾದ ಮಂಜು ಹಾಗೂ ಸಂತೋಷ್ ಎಂಬವರೊಂದಿಗೆ ಮನೆ ಸಮೀಪದ ಮದಗದಲ್ಲಿ ಈಜಲು ತೆರಳಿದ್ದರು. ಈ ವೇಳೆ ರಾಮ ಮೊಗೇರ ಆಳವಾದ ಗುಂಡಿಯಲ್ಲಿ ಮುಳುಗಿ ನಾಪತ್ತೆಯಾದರು. ರಾಮ ಮೊಗೇರರನ್ನು ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದ್ದು, ಬಳಿಕ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ತಡರಾತ್ರಿಯವರೆಗೂ ಹುಡುಕಾಟ ನಡೆಸಿದರು. ಆದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮೃತದೇಹವು ನೀರಿನಿಂದ ಮೇಲಕ್ಕೆ ಬಂದಿದ್ದು, ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಮ ಮೊಗೇರ ಪತ್ನಿ ಹಾಗೂ ಅವಳಿ ಜವಳಿ ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





