ಕೌಶಲ್ಯ ಅಭಿವೃದ್ಧಿ ಕೇಂದ್ರಗಳು ವಿದ್ಯಾರ್ಥಿಗಳಿಗೆ ಸಹಕಾರಿ: ಶಕುಂತಳಾ ಶೆಟ್ಟಿ
ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ,
ಪುತ್ತೂರು, ಮೇ 15: ರಾಜ್ಯದಲ್ಲಿ 5 ಲಕ್ಷ ವಿದ್ಯಾರ್ಥಿಗಳು ವರ್ಷ ವೊಂದರಲ್ಲಿ ಬೇರೆ ಬೇರೆ ಪದವಿಗಳ ಶಿಕ್ಷಣ ಮುಗಿಸುತ್ತಾರೆ. ಇಂತಹವರಿಗೆ ಮುಂದಿನ ಉದ್ಯೋಗ ಹಂತದಲ್ಲಿ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಸಹಕಾರಿ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.
ಅವರು ಸೋಮವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯ ವೆಬ್ ಪೋರ್ಟಲ್ ಉದ್ಘಾಟಿಸಿದರು. ಪುತ್ತೂರು ಸಹಾಯಕ ಆಯುಕ್ತ ಡಾ. ರಘುನಂದನ್ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಮಾತನಾಡಿದರು.
ಪುತ್ತೂರು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡ್, ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ ಶುಭ ಹಾರೈಸಿದರು.
ಪುತ್ತೂರು ತಹಶೀಲ್ದಾರ್ ಅನಂತ ಶಂಕರ ಸ್ವಾಗತಿಸಿದರು. ತಾಲೂಕು ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿ ಎಸ್. ಕುಮಾರ್ ವಂದಿಸಿದರು. ಶಿಕ್ಷಕಿ ವೇದಾವತಿ ಕಾರ್ಯಕ್ರಮ ನಿರೂಪಿಸಿದರು.
Next Story





