Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರ‍್ಯಾನ್ಸಮ್ ವೇರ್ ಸೈಬರ್ ದಾಳಿ ತಡೆದ 22...

ರ‍್ಯಾನ್ಸಮ್ ವೇರ್ ಸೈಬರ್ ದಾಳಿ ತಡೆದ 22 ವರ್ಷದ ಯುವಕ

ವಾರ್ತಾಭಾರತಿವಾರ್ತಾಭಾರತಿ16 May 2017 11:51 AM IST
share
ರ‍್ಯಾನ್ಸಮ್ ವೇರ್ ಸೈಬರ್ ದಾಳಿ ತಡೆದ 22 ವರ್ಷದ ಯುವಕ

ಇಂಗ್ಲೆಂಡ್, ಮೇ 16 : ರ‍್ಯಾನ್ಸಮ್ ವೇರ್ ಸೈಬರ್ ದಾಳಿಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಬ್ರಿಟನ್ನಿನ 22ರ ಯುವಕ ಮಾರ್ಕಸ್ ಹಚ್ಚಿನ್ಸ್ ಈಗ ಭಾರೀ ಸುದ್ದಿಯಲ್ಲಿದ್ದಾರೆ. ಲಾಸ್ ಏಂಜಲಿಸ್ ಮೂಲದ ಕ್ರಿಪ್ಟೋಸ್ ಲಾಜಿಕ್ ಸಂಸ್ಥೆಯಲ್ಲಿ ಕೆಲಸ ಮಾಡುವ ಮಾರ್ಕಸ್  ತನ್ನನ್ನು ಹೀರೋ ಎಂದೇನೂ ಪರಿಗಣಿಸುವುದಿಲ್ಲ. ‘‘ನಾವು ಸರಿಯಾದುದನ್ನೇ ಮಾಡಿದ್ದೇವೆ’’ ಎಂದು ಹೇಳುತ್ತಾರೆ ಈ ಪ್ರತಿಭಾವಂತ ಯುವಕ. ಸುಮಾರು 150 ದೇಶಗಳನ್ನು ಬಾಧಿಸಿರುವ ಈ ವೈರಸ್ ದಾಳಿಯನ್ನು ತಡೆಯಲು ನೂರಾರು ಕಂಪ್ಯೂಟರ್ ತಜ್ಞರು ಕಳೆದ ವಾರ ಪೂರ್ತಿ ದುಡಿದಿದ್ದಾರೆ ಎಂದು ಅವರು ಹೇಳುತ್ತಾರೆ.

ಈ ವೈರಸ್ ದಾಳಿಯ ವೇಗವನ್ನು ನಿಯಂತ್ರಿಸಲು ಮಾರ್ಕಸ್ ಅವರು ‘ಕಿಲ್ ಸ್ವಿಚ್’ ಅಭಿವೃದ್ಧಿಪಡಿಸಿದ್ದು, ನಂತರ ಅದರ ಮುಖಾಂತರ ಬ್ರಿಟಿನ್ನಿನ ಹಾಸ್ಪಿಟಲ್ ನೆಟ್ ವರ್ಕನ್ನು ಹಾಗೂ ಇತರ ಕಂಪ್ಯೂಟರುಗಳನ್ನು ಬಾಧಿಸಿದ ವೈರಸ್ ದಾಳಿಯನ್ನು ತಡೆಯಲು ಮೂರು ದಿನಗಳ ಕಾಲ ಸತತ ಪ್ರಯತ್ನ ಮಾಡಿದ್ದರು

ನೋಂದಣಿ ಮಾಡಿಲ್ಲದ ವೆಬ್ ಅಡ್ರೆಸ್ ಒಂದರಿಂದ ಒಂದು ಕೋಡ್ ಗಮನಿಸಿದ್ದ ಮಾರ್ಕಸ್ ಆ ಡೊಮೈನನ್ನು ಕೂಡಲೇ ರಿಜಿಸ್ಟರ್ ಮಾಡಿದ್ದು ಆಗ ಆ ರ‍್ಯಾನ್ಸಮ್ ವೇರ್ ಹರಡುವುದು ನಿಂತಿದ್ದು ಅವರ ಗಮನಕ್ಕೆ ಬಂದಿತ್ತು.

ಮಾರ್ಕಸ್ ಅವರ ಕಾರ್ಯವನ್ನು ಅವರ ಕಂಪೆನಿ ಸಿಇಒ ಸಲೀಂ ನೀನೊ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮಾರ್ಕಸ್ ಅವರು ಬಹು ಸಮಯದಿಂದ ಮಾಲ್‌ವೇರ್ ಟೆಕ್ ಎಂಬ ಟ್ವಿಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುತ್ತಿದ್ದು, ಇದೀಗ ವಿಶ್ವದಾದ್ಯಂತ ಖ್ಯಾತಿ ಪಡೆದಿದ್ದಾರಲ್ಲದೆ ಎಫ್‌ಬಿಐ ಹಾಗೂ ಬ್ರಿಟಿಷ್ ಸೈಬರ್ ಸೆಕ್ಯುರಿಟಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ.

ಮಾರ್ಕಸ್ ಅವರು ದಕ್ಷಿಣ ಇಂಗ್ಲೆಂಡಿನಲ್ಲಿರುವ ಇಲ್ಫ್ರಾಕೋಂಬ್ ಎಂಬ ಪಟ್ಟಣದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಮೂರು ದೊಡ್ಡ ಸ್ಕ್ರೀನ್ ಗಳಿರುವ ತಮ್ಮ ಕಂಪ್ಯೂಟರ್ ಮುಖಾಂತರ ಅವರು ತಮ್ಮ ಮನೆಯಿಂದಲೇ ಕಾರ್ಯಾಚರಿಸುತ್ತಿದ್ದಾರೆ. ಅವರ ತಾಯಿ ಜಾನೆಟ್ ನರ್ಸ್ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X