ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು, ಮೇ 16: ಪಾರ್ವತಮ್ಮ ರಾಜಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ದಾಖಲಾಗಿರುವ ಇಲ್ಲಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯ ಸ್ಥಿತಿ ಕುರಿತು ಮುಖ್ಯಮಂತ್ರಿ ವೈದ್ಯರಿಂದ ಮಾಹಿತಿ ಪಡೆದರು. ಶೀಘ್ರ ಗುಣಮುಖರಾಗುವಂತೆ ಸಿಎಂ ಹಾರೈಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯ ಸುಧಾರಿಸುತ್ತಿದೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದರು.
ಪುನೀತ್ ರಾಜಕುಮಾರ್ ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ಜೊತೆಗಿದ್ದರು.
Next Story





