Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 7.5 ಕೋ. ಹಣದೊಂದಿಗೆ ಪರಾರಿಯಾಗಿದ್ದ ಮೂವರ...

7.5 ಕೋ. ಹಣದೊಂದಿಗೆ ಪರಾರಿಯಾಗಿದ್ದ ಮೂವರ ಬಂಧನ: ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ16 May 2017 7:48 PM IST
share
7.5 ಕೋ. ಹಣದೊಂದಿಗೆ ಪರಾರಿಯಾಗಿದ್ದ ಮೂವರ ಬಂಧನ: ಕಮಿಷನರ್

ಮಂಗಳೂರು, ಮೇ 16: ನಗರದ ಯೆಯ್ಯಾಡಿಯ ಆ್ಯಕ್ಸಿಸ್ ಬ್ಯಾಂಕ್‌ನಿಂದ ಬೆಂಗಳೂರಿನ ಕೋರಮಂಗಲ ಆ್ಯಕ್ಸಿಸ್ ಬ್ಯಾಂಕ್‌ಗೆ ಹಣ ರವಾನೆ ಮಾಡದೆ ವಂಚಿಸಿದ ಎಸ್‌ಐಎಸ್ ಪ್ರೊಸೆಗ್ಯುರ್ ಹೋಲ್ಡಿಂಗ್ ಕಂಪೆನಿಯ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.

ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಲೆರೋ ವಾಹನ ಚಾಲಕ ಚಿತ್ರದುರ್ಗದ ಕರಿಬಸಪ್ಪ (24), ಗನ್‌ಮ್ಯಾನ್ ಕೊಡಗಿನ ಪೂವಪ್ಪ (38), ಹಣ ವಂಚಿಸಲು ಮಾರ್ಗದರ್ಶನ ನೀಡಿದ ಕೊಡಗಿನ ಕಾರಿಯಪ್ಪ ಯಾನೆ ಕಾಶಿ (46) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 6.30 ಕೋ.ರೂ. ವಶಪಡಿಸಲಾಗಿದೆ ಎಂದರು.

ಮೇ 11ರಂದು ಬೆಳಗ್ಗೆ 8:30ಕ್ಕೆ 7.5 ಕೋ.ರೂ.ವನ್ನು ಎಸ್‌ಐಎಸ್ ಪ್ರೊಸೆಗ್ಯುರ್ ಹೋಲ್ಡಿಂಗ್ ಕಂಪೆನಿಗೆ ಸೇರಿದ ಕೆ.ಎ.06 ಸಿ. 8389 ಸಂಖ್ಯೆಯ ಬೊಲೆರೋ ವಾಹನದಲ್ಲಿ ಆರೋಪಿಗಳು ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಯೆಯ್ಯಾಡಿ ಶಾಖೆಯ ಮುಖ್ಯಸ್ಥ ರಂಜಿತ್ ಅವರು ಕೋರಮಂಗಲ ಶಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ ಸಕಾಲದಲ್ಲಿ ಹಣ ತಲುಪದ ಕಾರಣ ಸಂಶಯಗೊಂಡ ಬ್ಯಾಂಕ್ ಅಧಿಕಾರಿಗಳು ಕಂಪೆನಿಯ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕಂಪೆನಿಯ ಸಚಿನ್ ಎಂಬವರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದರು.

ಆರೋಪಿಗಳು ಬ್ಯಾಂಕ್‌ಗೆ ಹಣ ತಲುಪಿಸಿಲ್ಲ. ಪ್ರಕರಣದ ತನಿಖೆ ನಡೆಸಿದಾಗ ಆರೋಪಿಗಳು ಸೋಮವಾರ ಪೇಟೆಯಿಂದ 20 ಕಿ.ಮೀ.ದೂರದಲ್ಲಿರುವ ಕುಂಬಾರುಗಡಿಗೆ ಎಂಬಲ್ಲಿನ ಕಾಡಿನಲ್ಲಿ ಹಣ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿತು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕಸ್ಟೋಡಿಯನ್ ಪರಶುರಾಮರ ಪಾತ್ರದ ಬಗ್ಗೆ ತನಿಖೆ ಮಾಡಲಾಗುತ್ತದೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಶೀಘ್ರ ಬಂಧಿಸಲಾಗುವುದು ಎಂದರು.

7.5 ಕೋ.ರೂ. ಪೈಕಿ 6.30 ಕೋ.ರೂ. ವಶಪಡಿಸಲಾಗಿದ್ದು, ಉಳಿದ ಹಣ ತಲೆಮರೆಸಿಕೊಂಡಿರುವ ಆರೋಪಿಗಳಲ್ಲಿ ಉಳಿದಿರುವ ಸಾಧ್ಯತೆ ಇದೆ. ಕಾರ್ಯಾಚರಣೆಗಾಗಿ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ಶೃತಿ, ಸಿಸಿಆರ್‌ಬಿ ಘಟಕದ ಎಸಿಪಿ ವೆಲೆಂಟೆನ್ ಡಿಸೋಜ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಈ ತಂಡವು ಮಡಿಕೇರಿ, ಬೆಂಗಳೂರು, ಮೈಸೂರು, ಚಿತ್ರದುರ್ಗ ಮತ್ತಿತರ ಕಡೆ ತೆರಳಿ ಕಾರ್ಯಾಚರಣೆ ನಡೆಸಿತ್ತು ಎಂದವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X