Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ...

‘ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಬೇಕು’

ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 May 2017 7:58 PM IST
share
‘ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಬೇಕು’

ಉಡುಪಿ, ಮೇ 16: ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಮಾಲಕರು, ಚಾಲಕರು ಹಾಗೂ ಶಿಕ್ಷಣ ಸಂಸ್ಥೆಗಳು, ಮಕ್ಕಳ ಸುರಕ್ಷಿತ ಸಾಗಾಣಿಕೆಗಾಗಿ ಸರಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಶಾಲಾ ಮಕ್ಕಳನ್ನು ಕರೆದೊಯ್ಯುವ ಎಲ್ಲಾ ವಾಹನಗಳು ವಾಹನದ ವಿಮಾ ಪಾಲಿಸಿ, ವಾಹನ ಫಿಟ್‌ನೆಸ್ ಪತ್ರ, ವಾಹನಗಳಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ತುರ್ತು ನಿರ್ಗಮನ ದ್ವಾರ ಸೇರಿದಂತೆ ಅಪಘಾತ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಹೊಂದಿರಬೇಕು ಎಂದರು.
 

ವಾಹನಗಳಿಗೆ ಹಳದಿ ಬಣ್ಣ ಮತ್ತು ನಾಲ್ಕು ಕಡೆಗಳಲ್ಲಿ ಶಾಲಾ ವಾಹನ ಎಂದು ಸ್ಪಷ್ಟವಾಗಿ ನಮೂದಿಸಿರಬೇಕು. ವಾಹನಗಳಿಗೆ ಕಡ್ಡಾಯವಾಗಿ ಸ್ಪೀಡ್ ಗವರ್ನರ್ ಅಳವಡಿಸಿರಬೇಕು ಹಾಗೂ ವಾಹನಗಳನ್ನು ಸುಸ್ಥಿತಿಯಿಲ್ಲಿಟ್ಟುಕೊಂಡು ನಿಗದಿತ ಸಂಖ್ಯೆಯ ಮಕ್ಕಳನ್ನು ಮಾತ್ರ ಕರೆದೊಯ್ಯುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
 

ಹನಗಳ ಚಾಲಕರಿಗೆ ಸುರಕ್ಷಿತ ಚಾಲನೆ ಕುರಿತಂತೆ ತರಬೇತಿ ನೀಡುವಂತೆ ಮತ್ತು ಸೂಕ್ತ ಚಾಲನಾ ಪರವಾನಗಿ ಇರುವ ಕುರಿತಂತೆ ದೃಢಪಡಿಸಿ ಕೊಳ್ಳಬೇಕು. ವಾಹನ ಚಾಲಕರ ನೇಮಕ ಸಂದರ್ಭದಲ್ಲಿ ಚಾಲಕನ ಹಿನ್ನಲೆಯನ್ನು ಸಂಬಂಧಿಸಿದ ಸಂಸ್ಥೆಗಳು ಕಡ್ಡಾಯವಾಗಿ ಪರಿಶೀಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲಾ ಮಕ್ಕಳ ಶಾಲಾ ವಾಹನದ ಚಾಲಕರಿಗೆ ಸುರಕ್ಷಿತ ಚಾಲನೆ ಕುರಿತಂತೆ ಪುರ್ನಮನನ ತರಬೇತಿ ನೀಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ಸಮಯದಲ್ಲಿ ವಾಹನಗಳ ಚಾಲಕರು ಪರಸ್ಪರ ಪೈಪೋಟಿಗೆ ಬೀಳದೆ ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಮತ್ತು ಮನೆಗೆ ತಲುಪಿಸಬೇಕು. ಶಾಲಾ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ವಿಳಾಸ, ತುರ್ತು ಸಂಪರ್ಕಿಸಲು ಅನುಕೂಲವಾಗುವಂತೆ  ದೂರವಾಣಿ ಸಂಖ್ಯೆಗಳ ವಿವರಗಳನ್ನು ಶಾಲೆಗಳು ಹೊಂದಿರಬೇಕು. ಮಳೆಗಾಲದಲ್ಲಿ ಮಕ್ಕಳು ಶಾಲೆಗೆ ನಿಗದಿತ ಸಮಯಕ್ಕೆ ತಲುಪಲು ಕೆಲವೊಮ್ಮೆ ಅಸಾಧ್ಯವಾಗಲಿದ್ದು, ಈ ಬಗ್ಗೆ ಮಕ್ಕಳು ಹಾಗೂ ಚಾಲಕರ ಮೇಲೆ ಒತ್ತಡ ಹಾಕದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಶಾಲೆಗಳು ಇರುವ ಕಡೆಗಳಲ್ಲಿ ಮತ್ತು ಶಾಲಾ ಮಕ್ಕಳು ಸಂಚರಿಸುವ ಪ್ರದೇಶದಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಹೆದ್ದಾರಿಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ರಾಂಗ್‌ಸೈಡ್‌ನಲ್ಲಿ ವಾಹನ ಚಲಾಯಿಸುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಗಸ್ತು ಪೊಲೀಸರಿಗೆ ಸೂಚಿಸಿದರು.
 

ಎಲ್ಲಾ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಿ. ಸಭೆಯಲ್ಲಿ ಪೋಷಕರು, ವಾಹನ ಚಾಲಕರಿಗೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಶಾಲೆಗೆ ಗ್ರೇಡಿಂಗ್: ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯಿದೆ ಅನುಷ್ಠಾನದ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿ, ಶಾಲೆಗಳಿಗೆ ಗ್ರೇಡಿಂಗ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಕ್ಕಳು ಶಾಲೆಗೆ ಬರುವ ದಾರಿಯಲ್ಲಿರುವ ಅಪಾಯಕಾರಿ ಕಲ್ಲು ಕ್ವಾರಿಗಳು, ಗುಂಡಿಗಳ ಕುರಿತು ಮಕ್ಕಳಿಂದ ಮಾಹಿತಿ ಪಡೆದು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಇಂತಹ ಸ್ಥಳಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಮುಂಜಾಗ್ರತಾ ವ್ಯವಸ್ಥೆ ಕಲ್ಪಿಸಲಾಗುವುದು. ಕಲ್ಲು ಕ್ವಾರಿಗಳ ಮಾಲಕರಿಗೆ ಸೂಕ್ತ ತಡೆಗೋಡೆ ನಿರ್ಮಿಸುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಗುರುಮೂರ್ತಿ ಕುಲಕರ್ಣಿ, ಡಿಡಿಪಿಐ ದಿವಾಕರ ಶೆಟ್ಟಿ ಹಾಗೂ ವಿವಿಧ ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X