Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತೀ ವಾರ ವರದಿ ನೀಡಲು ಜಿಪಂ ಅಧ್ಯಕ್ಷೆ...

ಪ್ರತೀ ವಾರ ವರದಿ ನೀಡಲು ಜಿಪಂ ಅಧ್ಯಕ್ಷೆ ಸೂಚನೆ

ಶುದ್ಧ ನೀರು ಘಟಕ

ವಾರ್ತಾಭಾರತಿವಾರ್ತಾಭಾರತಿ16 May 2017 8:40 PM IST
share

ಮಂಗಳೂರು ಮೇ 16: ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳ ಪ್ರಗತಿಯ ಬಗ್ಗೆ ಪ್ರತೀ ವಾರ ತನಗೆ ವರದಿ ನೀಡುವಂತೆ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ.
ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳ ಅನುಷ್ಠಾನದಲ್ಲಿ ತೀವ್ರ ವಿಳಂಭವಾಗುತ್ತಿದೆ. ಈಗಾಗಲೇ ಪೂರ್ಣಗೊಂಡಿರುವ ಘಟಕಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ಅಂತಿಮ ಹಂತದ ಮೂಲಸೌಕರ್ಯ ಕಲ್ಪಿಸದಿರುವುದರಿಂದ ಸಾರ್ವಜನಿಕರಿಗೆ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸದ್ಯದ ಸಂದರ್ಭದಲ್ಲಿ ಶುದ್ಧ ನೀರು ಘಟಕಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಬೇಕಾಗಿತ್ತು. ಆದರೆ ಜಿಲ್ಲೆಯಲ್ಲಿ ಶುದ್ಧ ನೀರು ಘಟಕಗಳ ಅನುಷ್ಠಾನ ವಹಿಸಿಕೊಂಡಿರುವ ಕೆಆರ್‌ಐಡಿಎಲ್ ಸಂಸ್ಥೆಯ ವಿಳಂಬ ಧೋರಣೆಯಿಂದ ಜಿಲ್ಲೆಯಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನವಾಗುತ್ತಿಲ್ಲ ಎಂದು ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಜಿಪಂ ಸಿಇಒ ಡಾ.ಎಂ.ಆರ್.ರವಿ, ಕೆಆರ್‌ಐಡಿಎಲ್ ಸಂಸ್ಥೆಯ ಕಾರ್ಯಕಾರಿ ಅಭಿಯಂತರರ ಕಾರ್ಯವೈಖರಿ ಬಗ್ಗೆ ಈಗಾಗಲೇ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಉಡುಪಿ ಜಿಲ್ಲೆಯ ಇಇ ಅವರಿಗೆ ಪ್ರಭಾರ ವಹಿಸಲಾಗಿದೆ ಎಂದು ಹೇಳಿದರು.
ಮಳೆಗಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗದಂತೆ ಮತ್ತು ಕೃತಕ ನೆರೆಗಳುಂಟಾಗದಂತೆ ರಸ್ತೆ ಬದಿಗಳಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಹಾಗೂ ಚರಂಡಿಗಳ ಹೂಳೆತ್ತಲು ತಕ್ಷಣವೇ ಕ್ರಮ ವಹಿಸುವಂತೆ ಗ್ರಾಪಂ ಪಿಡಿಒಗಳಿಗೆ ನಿರ್ದೇಶಿಸಿದರು.
 
 ನಗರದ ಕಪಿತಾನಿಯೋ ಎಂಬಲ್ಲಿ ಸರಕಾರಿ ಶಾಲೆಗೆ ಹೋಗುವ ರಸ್ತೆಯಲ್ಲಿ ಮರಳು, ಜಲ್ಲಿಗಳನ್ನು ನಿರಂತರವಾಗಿ ಸುರಿದು ಹಾಗೂ ವಾಹನಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಜಿಪಂ ಅಧ್ಯಕ್ಷರು ಸೂಚಿಸಿದರು. ಮಲೇರಿಯಾ ನಿಯಂತ್ರಣಕ್ಕೆ ತರಿಸಲಾಗುವ ಸೊಳ್ಳೆ ಪರದೆಗಳನ್ನು ಆರೋಗ್ಯ ಇಲಾಖೆಯು ಅಗತ್ಯವಿರುವ ಕಡೆ ತೆರಳಿ ವಿತರಿಸುವಂತೆ ತಿಳಿಸಿದ ಅವರು, ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಿಸುವುದರಿಂದ ಅಂಗನವಾಡಿಗಳಲ್ಲಿ ಸಿಗುವ ಸೌಲಭ್ಯದಿಂದ ಪುಟಾಣಿಗಳು ವಂಚಿತರಾಗುತ್ತಿದ್ದು, ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಿಸಲು ಅನುಮತಿ ನೀಡದಂತೆ ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X