ನಕಲಿ ಶರ್ಟ್ ಮಾರಾಟ: ಆರೋಪಿ ಸೆರೆ
ಬೆಂಗಳೂರು, ಮೇ 16: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಶ್ರೀರಾಂಪುರದ 5ನೆ ಕ್ರಾಸ್‌ನ ಮಹೇಂದ್ರ ಕುಮಾರ್ ಗೋಯಲ್ (23) ಬಂಧಿತ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಓಕಳಿಪುರಂನ 1ನೆ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶರ್ಟ್‌ಗಳನ್ನು ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಂಗ್ರಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ ಮಹೇಂದ್ರ ವಶದಲ್ಲಿದ್ದ ಒಟ್ಟು 3,267 ನಕಲಿ ಶರ್ಟ್‌ಗಳನ್ನು ವಶಪಡಿಸಿಕೊಂಡು ಇಲ್ಲಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story





