Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಹಶೀಲ್ದಾರ್ ಸಹಿತ 15 ಅಧಿಕಾರಿಗಳಿಗೆ ದಂಡ

ತಹಶೀಲ್ದಾರ್ ಸಹಿತ 15 ಅಧಿಕಾರಿಗಳಿಗೆ ದಂಡ

ತಂಬಾಕು ನಿಯಂತ್ರಣ ಮಂಡಳಿ ದಾಳಿ

ವಾರ್ತಾಭಾರತಿವಾರ್ತಾಭಾರತಿ16 May 2017 10:42 PM IST
share
ತಹಶೀಲ್ದಾರ್ ಸಹಿತ 15 ಅಧಿಕಾರಿಗಳಿಗೆ ದಂಡ

ಅಂಗಡಿಗಳ ಮೇಲೂ ದಾಳಿ: 104 ಪ್ರಕರಣ ದಾಖಲು
ವೀರಾಜಪೇಟೆ, ಮೇ 16: ವೀರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯ 100 ಮೀಟರ್ ಅಂತರದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಗರೇಟ್, ಬೀಡಿ, ಪಾನ್ ಪರಾಗ್ ಸೇರಿದಂತೆ ಇತರ ತಂಬಾಕು ವಸ್ತುಗಳನ್ನು ಬಹಿರಂಗವಾಗಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ.
ತಾಲೂಕು ಕಚೇರಿಯ ಆವರಣದಲ್ಲಿ ಧೂಮಪಾನ ನಿಷೇಧದ ನಾಮಫಲಕ ಹಾಕದಿರುವುದರಿಂದ ತಂಬಾಕು ನಿಯಂತ್ರಣ ಮಂಡಳಿಯು ತಹಶೀಲ್ದಾರ್ ಮಹದೇವಸ್ವಾಮಿ ಅವರಿಗೆ ರೂ. 100 ದಂಡ ವಿಧಿಸಿದೆ.


 ಮಂಗಳವಾರ ಬೆಳಗ್ಗೆ ಹೈ ಪವರ್ ಮಂಡಳಿಯ ಅಧಿಕಾರಿ ಡಾ.ಜಾನ್ ಕೆನಾಡಿಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪಟ್ಟಣ ಪಂಚಾಯತ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ, ಅಬಕಾರಿ ಇಲಾಖೆ ಹಾಗೂ ನಗರ ಪೊಲೀಸ್ ಠಾಣೆ ಸೇರಿದಂತೆ ನಾಲ್ಕು ತಂಡಗಳನ್ನು ರಚಿಸಿ ಗುಪ್ತ ದಾಳಿ ನಡೆಸಲಾಯಿತು.


 ಸಂಜೆಯ ತನಕ ಒಟ್ಟು 104 ಪ್ರಕರಣಗಳು ದಾಖಲಾಗಿವೆ. 18,750 ರೂ. ನಗದನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. 22,000 ರೂ. ವೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿ ನಡೆಸಲು ಪೊಲೀಸ್ ಇಲಾಖೆಯ ಅಧಿಕಾರಿ ಎನ್.ಕುಮಾರ್ ಆರಾಧ್ಯ, ನಗರ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್, ಪಟ್ಟಣ ಪಂಚಾಯತ್ ರೆವಿನ್ಯೂ ಇನ್‌ಸ್ಪೆಕ್ಟರ್ ತಂಡ, ಅಬಕಾರಿ ಇಲಾಖೆಯ ತಂಡ, ಶಿಕ್ಷಣಾಧಿಕಾರಿಯ ತಂಡ ದಾಳಿಯಲ್ಲಿ ಸಹಕರಿಸಿದ್ದರಿಂದ ಇಷ್ಟೊಂದು ಪ್ರಕರಣ ಪತ್ತೆಯಾಗಲು ಕಾರಣವಾಗಿದೆ.


 ವೀರಾಜಪೇಟೆ ಅರಣ್ಯ ಇಲಾಖೆ, ಕೃಷಿ ಇಲಾಖೆ, ಸಂಬಾರ ಮಂಡಳಿ, ಕಾಫಿ ಬೋರ್ಡ್, ಮೂರು ಕಾಲೇಜುಗಳ ಪ್ರಾಂಶುಪಾಲರು, ವಿವಿಧ ಇಲಾಖೆ ಸೇರಿದಂತೆ ಒಟ್ಟು 15ಮಂದಿ ಅಧಿಕಾರಿಗಳಿಗೆ ಧೂಮಪಾನ ನಿಷೇಧದ ನಾಮಫಲಕ ಅಳವಡಿಸದ ಕಾರಣ ದಂಡ ವಿಧಿಸಲಾಗಿದೆ ಎಂದು ಜಾನ್ ಕೆನಾಡಿಯ ತಿಳಿಸಿದ್ದಾರೆ.


ಈ ದಾಳಿಯ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿ ಕಠಿಣ ಕ್ರಮ ಕೈಗೊಳ್ಳಲು ಮಾರ್ಗದರ್ಶನ ನೀಡಿದ್ದರು. ಈ ಆದೇಶದಂತೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ದಾಳಿ ನಿರಂತರವಾಗಿ ಜಿಲ್ಲೆಯ ವಿವಿಧೆಡೆ ಮುಂದುವರಿಯಲಿದೆ ಎಂದು ಜಾನ್ ಕೆನಾಡಿಯ ತಿಳಿಸಿದ್ದಾರೆ.


ಯಾವುದೇ ಸರಕಾರಿ ಕಚೇರಿಯಾಗಲಿ ನಾಮಫಲಕ ಅಳವಡಿಸದಿರುವುದು, ಸಿಗರೇಟ್, ಬೀಡಿಯನ್ನು ಸೇದಿ ಅದರ ತುಂಡನ್ನು ಕಸದ ಬುಟ್ಟಿಗೆ ಎಸೆದಿರುವುದು ಕಂಡು ಬಂದರೂ ಒಂದು ತುಂಡು ಬೀಡಿಗೂ ತಲಾ ರೂ. 200ರಂತೆ ದಂಡ ವಿಧಿಸಲಾಗುವುದು. ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ವಿವಿಧ ದಿನಾಂಕಗಳನ್ನು ಗೊತ್ತುಪಡಿಸಿ ದಾಳಿ ನಡೆಯಲಿರುವುದಾಗಿ ಜಾನ್ ಕೆನಾಡಿಯ ತಿಳಿಸಿದರು.


ಪೊಲೀಸ್ ಇಲಾಖೆಯ ಅಧಿಕಾರಿ ಕುಮಾರ್ ಆರಾಧ್ಯ ಮಾತನಾಡಿ, ತಂಬಾಕು ನಿಯಂತ್ರಣ ಮಂಡಳಿಯ ಹೈ ಪವರ್ ಸಮಿತಿಗೆ ಈ ವಿಷಯದಲ್ಲಿ ಪೊಲೀಸ್ ಇಲಾಖೆ ಬಂದೋಬಸ್ತ್ ನೊಂದಿಗೆ ಪೂರ್ಣ ಸಹಕಾರ ನೀಡಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X