ಪ್ರಧಾನಿ-ಫೆಲೆಸ್ತೀನ್ ಅಧ್ಯಕ್ಷರ ಮಾತುಕತೆ

ಹೊಸದಿಲ್ಲಿ,ಮೇ 16: ಪ್ರಧಾನಿ ನರೇಂದ್ರ ಮೋದಿ ಮತ್ತು ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಮಂಗಳವಾರ ಇಲ್ಲಿಯ ಹೈದರಾಬಾದ್ ಭವನದಲ್ಲಿ ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆ ಸೇರಿದಂತೆ ಪ್ರಮುಖ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಮಾತುಕತೆಗಳನ್ನು ನಡೆಸಿದರು.
ಭಾರತ ಮತ್ತು ಫೆಲೆಸ್ತೀನ್ ನಡುವೆ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಗಾಢಗೊಳಿಸುವ ಬಗ್ಗೆ ಉಭಯ ನಾಯಕರು ಮುಖ್ಯವಾಗಿ ಚರ್ಚಿಸಿದರು.
ಇದಕ್ಕೂ ಮುನ್ನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಅಬ್ಬಾಸ್ ಅವರನ್ನು ಭೇಟಿಯಾಗಿ ಫೆಲೆಸ್ತೀನ್ ಹೋರಾಟಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು.
ಬೆಳಿಗ್ಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಅಬ್ಬಾಸ್ ಅವರನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಮೋದಿ ಹಾರ್ದಿಕವಾಗಿ ಸ್ವಾಗತಿಸಿದರು. ಅವರಿಗೆ ಸಾಂಪ್ರದಾಯಿಕ ಗೌರವ ರಕ್ಷೆಯನ್ನು ನೀಡಲಾಯಿತು.
ಅಬ್ಬಾಸ್ ನಾಲ್ಕು ದಿನಗಳ ಭೇಟಿಗಾಗಿ ರವಿವಾರ ಭಾರತಕ್ಕೆ ಆಗಮಿಸಿದ್ದಾರೆ.
Next Story





