ಪುತ್ತೂರಿನಲ್ಲಿ ಯುವ ಕಾಂಗ್ರೆಸ್ ಚುನಾವಣೆ

ಪುತ್ತೂರು, ಮೇ 16: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲೇ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮಂಗಳವಾರ ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆಯಿತು.
ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯು.ಟಿ.ತೌಸಿಫ್ ಹಾಗೂ ಸಲೀಂ ನಡುವೆ ಪೈಪೋಟಿ ಏರ್ಪಟ್ಟಿತ್ತು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷತೆಯ ಚುನಾವಣೆ ಕುತೂಹಲದ ಕೇಂದ್ರ ಬಿಂದುವಾಗಿದ್ದು, ಮಿಥುನ್ ರೈ ಮತ್ತೊಮ್ಮೆ ಅಧ್ಯಕ್ಷ ಗಾದಿಯ ಚುನಾವಣೆಯಲ್ಲಿ ಕಾಣಿಸಿಕೊಂಡಿದ್ದು, ಲುಕ್ಮನ್ ನಡುವೆ ಸ್ಪರ್ಧೆಯಿದೆ. ಇವೆರಡು ಬಣಗಳ ಬೆಂಬಲಿತರು ಪುತ್ತೂರಿನಲ್ಲೂ ಪ್ರತ್ಯೇಕ ಕೇಂದ್ರ ಸ್ಥಾಪಿಸಿದ್ದರು ಎಂದು ತಿಳಿದುಬಂದಿದೆ.
Next Story





