ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು, ಮೇ 17: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು ಏಳು ದಿನಗಳ ವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಂತಕಲ್ ಮೈನಿಂಗ್ ಪ್ರಕರಣದ ಎಫ್‌ಐಆರ್ ನಲ್ಲಿ ಕುಮಾರ ಸ್ವಾಮಿ ಹೆಸರಿರುವ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ 5 ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಲು ಮತ್ತು ದೇಶ ಬಿಟ್ಟು ತೆರಳದಂತೆ ಆದೇಶ ನೀಡಿದೆ.
ರೀಕ್ಷಣಾ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ವಕೀಲರಿಗೆ ಕಾಲಾವಕಾಶ ನೀಡಿ ಪ್ರಕರಣದ ವಿಚಾರಣೆಯನ್ನು ಮೇ 22ಕ್ಕೆ ಮಂಡೂಡಿದೆ.
Next Story





