ಮೇ 18ರಂದು ಚಿಕ್ಕಮಗಳೂರಿಗೆ ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥ್ ಭೇಟಿ

ಚಿಕ್ಕಮಗಳೂರು, ಮೇ17: ಎಐಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗದ ಉಸ್ತುವಾರಿ ಪಿ.ಸಿ.ವಿಷ್ಣುನಾಥ್ ಮೇ 18ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆಂದು ಪಕ್ಷದ ಜಿಲ್ಲಾ ವಕ್ತಾರ ಎಂ.ಸಿ. ಶಿವಾನಂದ ಸ್ವಾಮಿ ತಿಳಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆ ಸದಸ್ಯ ವೇಣುಗೋಪಾಲ್ ಜತೆ ನಾಲ್ವರು ಎಐಸಿಸಿ ಕಾರ್ಯದರ್ಶಿಗಳಿಗೆ ರಾಜ್ಯದ ಉಸ್ತುವಾರಿ ಜವಾಬ್ದಾರಿ ನೀಡಿದ್ದು. ನಾಯಕರು 3 ದಿನಗಳ ಕಾಲ ಪಕ್ಷ, ಸರ್ಕಾರ, ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಪ್ರತೀ ವಿಭಾಗಕ್ಕೆ ನೇಮಕವಾಗಿರುವ ಎಐಸಿಸಿ ಕಾರ್ಯದರ್ಶಿಗಳು ಮೊದಲ ಹಂತದಲ್ಲಿ ಪ್ರವಾಸ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ, ವಿಷ್ಣುನಾಥ್‌ರವರು ಜಿಲ್ಲೆಗೆ ಆಗಮಿಸಿದ್ದಾರೆಂದು ಅವರು ತಿಳಿಸಿದ್ದಾರೆ. ನಂತರ ಪಕ್ಷದ ಪದಾಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಲಿದ್ದಾರೆ ಎಂದು ಅವರು ಈ ಸಂದರ್ಭ ತಿಳಿಸಿದರು.
Next Story





