ಸರಕಾರಿ ಜಾಗದಲ್ಲಿನ ಅಕ್ರಮ ಮನೆಗಳ ಸಕ್ರಮಕ್ಕೆ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಮೇ 17: ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
30x40 ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಚದರ ಅಡಿ ಅಳತೆಯ ನಿವೇಶನದಲ್ಲಿ ಕಟ್ಟಿರುವ ಅಕ್ರಮ ಮನೆ ಸಕ್ರಮಗೊಳಿಸಲಾಗುವುದು ಎಂದು ಕಾನೂನು ಸಚಿವ ಜಯಚಂದ್ರ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ನಗರ ಕೇಂದ್ರದಿಂದ 18 ಕಿ.ಮೀ ಪರಿಮಿತಿಯೊಳಗಿರುವ ಮನೆಗಳನ್ನು ಸಕ್ರಮ ಮಾಡಲಾಗುವುದು. ನಗರಸಭೆ-5ಕಿಮೀ, ಪುರಸಭೆ, ಪಟ್ಟಣ ಪಂಚಾಯಿತಿಯ ಬಫರ್ ಜೋನ್ ವ್ಯಾಪ್ತಿಯಲ್ಲಿನ ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದು ಜಯಚಂದ್ರ ವಿವರಿಸಿದರು.
ಎಸ್ಸಿ-ಎಸ್ಟಿ, ನಿವೃತ್ತ ಸೈನಿಕರು, ವಿಕಲಚೇತನರಿಗೆ 5 ಸಾವಿರ ರೂ. ಹಾಗೂ ಉಳಿದವರಿಗೆ 10 ಸಾವಿರ ರೂ. ದರ ನಿಗದಿಪಡಿಸಲಾಗಿದೆ ಎಂದ ಅವರು, ಅರಣ್ಯ, ಗೋಮಾಳ, ಕೆರೆ ಅಂಗಳ ವ್ಯಾಪ್ತಿಯಲ್ಲಿ ಕಟ್ಟಿದ ಅಕ್ರಮ ಮನೆಗಳ ಸಕ್ರಮಕ್ಕೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.







