ನೇಣು ಬಿಗಿದು ಯುವಕ ಆತ್ಮಹತ್ಯೆ
ಉಳ್ಳಾಲ, ಮೇ 17: ಕುಂಪಲ, ಮೂರುಕಟ್ಟೆ ಸಮೀಪದ ಬಲ್ಯ ಬಳಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೆಎಸ್‌ಆರ್‌ಟಿಸಿಯ ನಿವೃತ್ತ ಉದ್ಯೋಗಿ ಶಿವರಾಮ ಎಂಬವರ ಪುತ್ರ ಧನಂಜಯ (30) ಆತ್ಮಹತ್ಯೆಗೈದವರು ಎಂದು ಗುರುತಿಸಲಾಗಿದೆ.
ಅವರ ಮೃತದೇಹವು ಮನೆಯ ಸಮೀಪ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧನಂಜಯ್, ಆರ್ಥಿಕ ಅಡಚಣೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.
ವಾರದ ಹಿಂದಷ್ಟೇ ಸಹೋದರಿಯ ವಿವಾಹ ಸಮಾರಂಭ ಮನೆಯಲ್ಲಿ ನಡೆದಿದ್ದು, ಅದಕ್ಕಾಗಿ ಹಾಕಿದ್ದ ತೋರಣಗಳು ಇನ್ನೂ ತೆಗೆಯುವ ಮುನ್ನವೇ ಧನಂಜಯ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





