ವಾಹನ ಢಿಕ್ಕಿ: ಅಪರಿಚಿತ ಮೃತ್ಯ
ನಾಗಮಂಗಲ, ಮೇ 17: ಅಪರಿಚಿತ ವಾಹನ ಢಿಕ್ಕಿಯೊಡೆದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಅಪರಿಚಿತನಾಗಿದ್ದು, ಆತನ ಬಲಗೈ ಮೇಲೆ ಡಾ. ರಾಜ್ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ.
ಮೃತದೇಹ ವನ್ನು ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರಿದ್ದಲ್ಲಿ ಬೆಳ್ಳೂರು ಠಾಣೆ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.
Next Story





