ಡಿಮಾನಿಟೈಸೇಶನ್ ಡೆತ್: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಮುಂದಾದ ಕೇರಳ ಸರಕಾರ

ತಿರುವನಂತಪುರಂ, ಮೇ 18: 500 ಹಾಗೂ 1000 ಮುಖಬೆಲೆಯ ಹಳೆಯ ನೋಟುಗಳು ಅಮಾನ್ಯಗೊಂಡ ಸಂದರ್ಭ ಗಂಟೆಗಟ್ಟಲೆ ಎಟಿಎಂ ಕ್ಯೂಗಳಲ್ಲಿ ನಿಂತು ಪ್ರಾಣ ಕಳೆದುಕೊಂಡಿದ್ದ ನಾಲ್ವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲು ಕೇರಳ ಸರಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ ನಂತರದ ದಿನಗಳಲ್ಲಿ ಎಟಿಎಂಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಂತು ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದರು.
Next Story





