ರಾಜ್ಯದ ರಾಜ್ಯ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಸಮವಸ್ತ್ರ

ಬೆಂಗಳೂರು, ಮೇ 18: ರಾಜ್ಯ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಬರುವ ಶೈಕ್ಷಣಿಕ ವರ್ಷದಿಂದ ಸ್ಕರ್ಟ್ ಗೆ ಬದಲಾಗಿ ಚೂಡಿದಾರ್ ಸಮವಸ್ತ್ರ ದೊರೆಯಲಿದೆ.
ವಿದ್ಯಾರ್ಥಿನಿಯರಿಗೆ ಸಮವಸ್ತ್ರವಾಗಿ ನೀಲಿ ಮತ್ತು ಗಾಢ ನೀಲಿ ಬಣ್ಣದ ಚೂಡಿದಾರ್ ನೀಡಲಾಗುವುದು.
ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ 8ರಿಂದ 10ನೇ ತರಗತಿಯಲ್ಲಿ ಒಟ್ಟು 8.5 ಲಕ್ಷ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಸರಕಾರದ ಸೌಲಭ್ಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ದೊರೆಯಲಿದೆ.
ಕೆಲವು ಶಾಲೆಗಳಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ವಿದ್ಯಾರ್ಥಿನಿಯರಿಗೆ ಚೂಡಿದಾರ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





