ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು, ಮೇ18: ಇಲ್ಲಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಆರೋಗ್ಯದ ಸ್ಥಿತಿ ಗಂಭೀರವಾಗಿದೆ.
ಪಾರ್ವತಮ್ಮ ಕುಟುಂಬದವರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದಿವಂಗತ ಡಾ. ರಾಜ್‌ಕುಮಾರ್ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ಆರೋಗ್ಯ ಸ್ಥಿತಿ ಇಂದು ಬೆಳಗ್ಗಿನ ಜಾವ 3:00ಗಂಟೆಯ ಹೊತ್ತಿಗೆ ಗಂಭೀರವಾಗಿದೆ.ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ.
ಚೇತರಿಸಿಕೊಳ್ಳುತ್ತಿದ್ದಾರೆ: ಶಿವಣ್ಣ
ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಸ್ಥಿತಿ ನಿನ್ನೆಗಿಂತ ಸುಧಾರಣೆ ಕಂಡು ಬಂದಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾರು ಆತಂಕಪಡಬೇಕಾದ ಅಗತ್ಯವಿಲ್ಲ. ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪುತ್ರ ಡಾ.ಶಿವರಾಜ್ ಕುಮಾರ್ ತಿಳಿಸಿದ್ದಾರೆ.







