Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುಸಿದು ಬಿದ್ದ 6 ಮಹಡಿಯ ಕಟ್ಟಡದ ಕೆಳಗೆ...

ಕುಸಿದು ಬಿದ್ದ 6 ಮಹಡಿಯ ಕಟ್ಟಡದ ಕೆಳಗೆ 80 ಗಂಟೆಗಳ ಕಾಲ ಸಿಲುಕಿ ಬದುಕುಳಿದ 6 ತಿಂಗಳ ಕೂಸು

ವಾರ್ತಾಭಾರತಿವಾರ್ತಾಭಾರತಿ18 May 2017 8:49 PM IST
share
ಕುಸಿದು ಬಿದ್ದ 6 ಮಹಡಿಯ ಕಟ್ಟಡದ ಕೆಳಗೆ 80 ಗಂಟೆಗಳ ಕಾಲ ಸಿಲುಕಿ ಬದುಕುಳಿದ 6 ತಿಂಗಳ ಕೂಸು

ಕಿನ್ಯಾ, ಮೇ 18: ಭಾರೀ ಗಾಳಿಮಳೆಯಿಂದ ಕುಸಿದುಬಿದ್ದ 6 ಅಂತಸ್ತುಗಳ ಕಟ್ಟಡದ ಕೆಳಗೆ ಸುಮಾರು 80 ಗಂಟೆಗಳ ಕಾಲ ಸಿಲುಕಿದ್ದ ಮಗುವೊಂದು ಪವಾಡಸದೃಶವಾಗಿ ಬದುಕುಳಿದ ಘಟನೆ ಕಿನ್ಯಾದ ನೈರೋಬಿಯಲ್ಲಿ ನಡೆದಿದೆ,

ನಾಲ್ಕು ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕೀನ್ಯಾದ ರೆಡ್ ಕ್ರಾಸ್ ಸಿಬ್ಬಂದಿ ಕೊನೆಗೂ ಮಗುವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.  

“80 ಗಂಟೆಗಳ ಕಾಲ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮಗು ಬ್ಲಾಂಕೆಟೊಂದರಲ್ಲಿ ಸುತ್ತಲಾಗಿದ್ದ ಬಕೆಟ್ ಒಂದರಲ್ಲಿ ಪತ್ತೆಯಾಗಿತ್ತು. ಮಗು ನಿರ್ಜಲೀಕರಣಕ್ಕೆ ತುತ್ತಾಗಿತ್ತಾದರೂ ಯಾವುದೇ ದೈಹಿಕ ಗಾಯಗಳಾಗಿರಲಿಲ್ಲ” ಎಂದು ರೆಡ್ ಕ್ರಾಸ್ ನ ಆ್ಯಂಟನಿ ವಾಂಗಿ ಹೇಳಿದ್ದಾರೆ.

ಪವಾಡಸದೃಶವಾಗಿ ಬದುಕುಳಿದ 6 ತಿಂಗಳ ಮಗು ಡೀಲೆರಿನ್ ಸೈಸಿ ವಸಿಕೆಯನ್ನು ಕೆನ್ಯಟ್ಟಾ ನ್ಯಾಶನಲ್ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಗುವಿನ ತಂದೆ ರಲ್ಸಾನ್ ಸೈಸಿ, “ನನ್ನ ಮಗುವನ್ನು ರಕ್ಷಿಸಿದ ದೇವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಾನು ಆಕೆಯ ಹೆಸರನ್ನು ಕರೆದೆ. ಅದೇ ಸಂದರ್ಭ ಆಕೆ ಕೈ ಎತ್ತಿದಳು. ನನ್ನ ಮಗು ಕೊನೆಗೂ ಸಿಕ್ಕಿತು” ಎಂದವರು ಹೇಳಿದ್ದಾರೆ. ಇಷ್ಟೇ ಅಲ್ಲದೆ ರಕ್ಷಣಾ ತಂಡಕ್ಕೂ ಕೃತಜ್ಞತೆ ಸಲ್ಲಿಸಿರುವ ಅವರು, “ರಕ್ಷಣಾ ಕಾರ್ಯಕರ್ತರ ಪ್ರಯತ್ನ, ಅವರ ತಾಳ್ಮೆಯಿಂದಲೇ ನನ್ನಂತವರ ಮುಖದಲ್ಲಿಂದು ಸಂತೋಷವಿದೆ” ಎಂದು ಹೇಳಿದ್ದಾರೆ.

ಚಿಕಿತ್ಸೆ ಪಡೆಯುತ್ತಿರುವ ಮಗು ಆರೋಗ್ಯದಿಂದಿದ್ದು, ನಿರ್ಜಲೀಕರಣವೂ ಸರಿಯಾಗಿದೆ. ಆದರೆ ದುರದೃಷ್ಟವಶಾತ್ ಮಗು ತಾಯಿಯನ್ನು ಕಳೆದುಕೊಂಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X