Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ 26ರಿಂದ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ...

ಮೇ 26ರಿಂದ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ ನಿರ್ವಹಣೆ ಜಾಗೃತಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ18 May 2017 10:55 PM IST
share
ಮೇ 26ರಿಂದ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ ನಿರ್ವಹಣೆ ಜಾಗೃತಿ ಅಭಿಯಾನ

ಮಡಿಕೇರಿ ಮೇ 18: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಹಾಗೂ ತ್ಯಾಜ್ಯ ನಿರ್ವಹಣೆ ಬಗ್ಗೆ ಮೇ 26 ರಿಂದ 28 ರವರೆಗೆ ಗ್ರಾ.ಪಂ.ಮಟ್ಟದಲ್ಲಿ ಮೂರು ದಿನಗಳ ಕಾಲ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ. ಸಿಇಒ ಚಾರುಲಾ ಸೋಮಲ್ ಅವರು ತಿಳಿಸಿದ್ದಾರೆ.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿ.ಪಂ. ಈಗಾಗಲೇ ಸ್ವಚ್ಛ ಭಾರತ್ ಅಭಿಯಾನದಡಿ ಪ್ರಶಸ್ತಿ ಪಡೆದಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ನ್ನು ಸಂಪೂರ್ಣವಾಗಿ ನಿಷೇಧ ಮಾಡಿರುವುದರಿಂದ ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳು ನಡೆಯಬೇಕಿದೆ. ಆದ್ದರಿಂದ ಗ್ರಾ.ಪಂ.ಮಟ್ಟದಲ್ಲಿ ಯಾವುದಾದರೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಪ್ಲಾಸ್ಟಿಕ್ ನಿಷೇಧ ಹಾಗೂ ತ್ಯಾಜ್ಯ ನಿರ್ವಹಣೆ ಬಗ್ಗೆ ಅರಿವು ಮೂಡಿಸುವಂತೆ ಗ್ರಾ.ಪಂ. ಪಿಡಿಒಗಳಿಗೆ ಜಿ.ಪಂ.ಸಿಇಒ ಅವರು ಸೂಚನೆ ನೀಡಿದರು.
 
ಈ ಸಂದರ್ಭದಲ್ಲಿ ಮಾತನಾಡಿದ ಗೋಗ್ರಿ ಸಂಸ್ಥೆಯ ಅರುಣ್ ಅಪ್ಪಚ್ಚು ಅವರು ಜಿಲ್ಲೆಯಲ್ಲಿ ವಿವಿಧ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನ್ನು ಬಳಸುತ್ತಾರೆ. ಇದನ್ನು ನಿಷೇಧ ಮಾಡಬೇಕು. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು. ಪ್ಲಾಸ್ಟಿಕ್ ನಿಷೇಧ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಶಿಕ್ಷೆ ವಿಧಿಸುವಂತಾಗಬೇಕು. ಇದರಿಂದ ಎಚ್ಚೆತ್ತುಕೊಳ್ಳಲು ಸಾಧ್ಯ ಎಂದು ಅವು ಅಭಿಪ್ರಾಯ ವ್ಯಕ್ತಪಡಿಸಿದರು.
ಚೇಂಬರ್ ಆಪ್ ಕಾಮರ್ಸ್‌ನ ನಿರ್ದೇಶಕರಾದ ಮೋಂತಿ ಗಣೇಶ್ ಅವರು ಮಾತನಾಡಿ ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸರ್ಕಾರ ಎಲ್ಲರಿಗೂ ಒಂದಲ್ಲ ಒಂದು ರೀತಿಯ ಸೌಲಭ್ಯ ಕಲ್ಪಿಸುತ್ತಿದೆ. ಆದರೆ ಕರ್ತವ್ಯಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸಮಾಜದಲ್ಲಿ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಸ್ವಚ್ಛ ಪರಿಸರ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿ.ಪಂ.ಉಪಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಸತ್ಯನ್, ಉಪ ಕಾರ್ಯದರ್ಶಿ ಶ್ರೀಕಂಠ ಮೂರ್ತಿ, ತಾ.ಪಂ.ಇಒಗಳಾದ ಪಡ್ನೇಕರ್, ಜೀವನ್ ಕುಮಾರ್, ಸುನೀಲ್,ಗ್ರಾ.ಪಂ.ಗಳ ಪಿಡಿಓಗಳು ಇದ್ದರು.

ಅಭಿಯಾನದ ಸಂದರ್ಭದಲ್ಲಿ ಗಡಿ ಭಾಗದ ಪ್ರವೇಶ ದ್ವಾರದಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ತಂಡಗಳ ರಚನೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸ್ವಯಂ ಸೇವಕರ ತಂಡದ ಮಾಹಿತಿ ಪಡೆದುಕೊಳ್ಳುವುದು. ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ಮತ್ತು ಸಂಘ ಸಂಸ್ಥೆಗಳ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರುವುದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X