ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕಾರ್ಕಳ, ಮೇ 19: ಸಾಣೂರು ನಲ್ಲಿ ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ವಿದ್ಯಾರಾಮ ಎಂದು ಗುರುತಿಸಲಾಗಿದೆ. ಬಜಗೋಳಿ ಕಡೆಯಿಂದ ಪುಲ್ಕೇರಿ ಬೈಪಾಸ್ ಕಡೆಗೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಇದ ರಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರಾಮ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ಕಾರ್ಕಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ದಾಖಲಾಗಿದೆ.
Next Story