ರೈಲು ಢಿಕ್ಕಿ: ವೃದ್ಧರೊಬ್ಬರಿಗೆ ಗಾಯ
ಉಳ್ಳಾಲ, ಮೇ19: ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ರೈಲು ಬಡಿದು ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರೈಲ್ವೇ ಹಳಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ವೃದ್ಧರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಢಿಕ್ಕಿಯ ಪರಿಣಾಮ ಎರಡೂ ಕಾಲುಗಳು ತುಂಡಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವೃದ್ಧರು ರೈಲು ಹಳಿ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸ್ಥಳೀಯರೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ವೃದ್ಧರನ್ನು ಆಸ್ಪತ್ರೆಗೆ ಸಾಗಿಸುವ ಭರದಲ್ಲಿ ತುಂಡಾದ ಕಾಲಿನ ಪಾದ ಘಟನಾ ಸ್ಥಳದಲ್ಲೇ ಉಳಿದಿತ್ತು. ಪಾದ ಉಳಿದ ಬಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿಯಂತೆ ರಾತ್ರಿ ವೇಳೆ ಆಗಮಿಸಿದ ಪೊಲೀಸರು ಸುಮಾರು ಒಂದು ಗಂಟೆಯ ಹುಡುಕಾಟದ ಬಳಿಕ ಕಾಲಿನ ಪಾದವನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ಒಪ್ಪಿಸಿದ್ದಾರೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





