ವೈದ್ಯರ ಮೇಲೆ ಹಲ್ಲೆ: ಮೇ 22ರಂದು ವೈದ್ಯರ ಮುಷ್ಕರ
ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ಸೇವೆ ಬಂದ್
ಮಂಗಳೂರು, ಮೇ 20: ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಹಾಗೂ ಇತರ ವಿವಿಧ ವೈದ್ಯಕೀಯ ಸಂಘಟನೆಗಳ ಆಶ್ರಯದಲ್ಲಿ ಮೇ 22ರಂದು ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಶನ್‌ನ ನಿಯೋಜಿತ ಅಧ್ಯಕ್ಷ ಡಾ.ಕೆ.ಆರ್.ಕಾಮತ್ ತಿಳಿಸಿದ್ದಾರೆ.
ನಗರದ ಐಎಂಎ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಷ್ಕರದ ಹಿನ್ನೆಲೆಯಲ್ಲಿ ಅಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತುರ್ತು ಚಿಕಿತ್ಸೆ ಹಾಗೂ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿದೆ ಎಂದರು.
ಮೇ 22ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವೈದ್ಯರು ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಡಲಿದ್ದು, ನೆಹರೂ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದರು.
Next Story





