Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತರು ಪ್ರಧಾನಿ-ಸಿಎಂ ಆಗಲಿಲ್ಲ ಎಂಬ...

ದಲಿತರು ಪ್ರಧಾನಿ-ಸಿಎಂ ಆಗಲಿಲ್ಲ ಎಂಬ ನೋವಿದೆ: ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ20 May 2017 6:30 PM IST
share
ದಲಿತರು ಪ್ರಧಾನಿ-ಸಿಎಂ ಆಗಲಿಲ್ಲ ಎಂಬ ನೋವಿದೆ: ಎಚ್.ಆಂಜನೇಯ

ಬೆಂಗಳೂರು, ಮೇ 20: ದಲಿತ ಸಮುದಾಯಕ್ಕೆ ಸೇರಿದಂತಹವರು ದೇಶದ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿಲ್ಲ ಎಂಬ ನೋವು ತಮಗಿದೆ.

ನಮ್ಮ ದುಃಖ, ನೋವನ್ನು ಕೇಳುವವರು ಯಾರು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಪ್ರಶ್ನಿಸಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ಗೆ ಮತ ನೀಡಿ, ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಅಭಿಪ್ರಾಯ ವ್ಯಕ್ತವಾದರೆ, ಅದನ್ನು ಆಧರಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬಹುದಾಗಿದೆ ಎಂದರು.

ಬ್ರಿಟೀಷರ ಗುಂಡಿಗೆ ಎದೆಕೊಟ್ಟವರು ನಾವು, ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದ್ದವರು ನಾವು. ದೇಶಕ್ಕೆ ಅನ್ನಕೊಟ್ಟ ಶ್ರಮಜೀವಿಗಳೂ ನಾವೇ. ಆದರೆ, ಸ್ವಾತಂತ್ರ ಭಾರತದ ಇತಿಹಾಸದಲ್ಲಿ ಈವರೆಗೆ ದಲಿತರೊಬ್ಬರು ಪ್ರಧಾನಮಂತ್ರಿ ಆಗಲು ಸಾಧ್ಯವಾಗಿಲ್ಲ. ಬಾಬೂಜಗ ಜೀವನ ರಾಮ್‌ಗೆ ಅಂತಹ ಅವಕಾಶ ಒದಗಿ ಬಂದಿತ್ತು. ಬಹುಮತವು ಇತ್ತು. ಆದರೆ ಅಸ್ಪೃಶ್ಯರು ಎಂಬ ಕಾರಣಕ್ಕೆ ಕೊಳಕು ಮನಸ್ಸಿನವರು ಆ ಅವಕಾಶವನ್ನು ಕೊಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಉಪ ಪ್ರಧಾನಿಯಾದ ಬಾಬು ಜಗಜೀವನ್‌ರಾಮ್‌ಗೆ ಆಗಿನ ರಾಷ್ಟ್ರಪತಿಗಳು ಪ್ರಮಾಣ ವಚನ ಕೂಡ ಬೋಧಿಸಲಿಲ್ಲ. ಈವೆಲ್ಲ ಅನ್ಯಾಯ, ತಾರತಮ್ಯಗಳನ್ನು ನೆನಪು ಮಾಡಿಕೊಂಡರೆ ಕಣ್ಣಲ್ಲಿ ನೀರಲ್ಲ, ರಕ್ತ ಬರುತ್ತದೆ ಎಂದು ಆಂಜನೇಯ ನುಡಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ, ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೆ, ದಲಿತರೆ ಮುಖ್ಯಮಂತ್ರಿಯಾಗಲಿ. ಕಾಂಗ್ರೆಸ್ ಪಕ್ಷವು ದಲಿತರ ಕೈಯಲ್ಲಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಹಾಗೂ ಪ್ರಮುಖ ಖಾತೆಗಳ ಸಚಿವರು ದಲಿತರೆ ಆಗಿದ್ದಾರೆ ಎಂದು ಅವರು ಹೇಳಿದರು.

ದಲಿತ ಎಂಬುದು ಜಾತಿಯಲ್ಲ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ ಸೇರಿದಂತೆ ಎಲ್ಲ ಜನಾಂಗಗಳಲ್ಲಿ ಇರುವಂತಹ ಬಡವರು, ಅವಕಾಶ ವಂಚಿತ, ಶೋಷಿತರೆಲ್ಲರೂ ದಲಿತರೆ. ರಾಜ್ಯದಲ್ಲಿರುವುದು ದಲಿತರು ಹಾಗೂ ಶೋಷಿತರ ಕಲ್ಯಾಣದ ಪರವಾಗಿರುವ ಸರಕಾರ ಎಂದು ಆಂಜನೇಯ ತಿಳಿಸಿದರು.

ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕೆಂದು ಹಲವಾರು ಚರ್ಚೆಗಳು ನಡೆಯುತ್ತಿವೆ. 2008ರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲೆ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಿತು. ಆದರೆ, ನಮ್ಮ ಪಕ್ಷಕ್ಕೆ ಬಹುಮತ ಬಾರದ ಕಾರಣ, ಅವರು ಮುಖ್ಯಮಂತ್ರಿ ಆಗಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X