ಮೇ 22: ಉಡುಪಿಯಲ್ಲೂ ವೈದ್ಯರ ಸೇವೆ ಸ್ಥಗಿತ
ಉಡುಪಿ, ಮೇ 20: ಕರ್ತವ್ಯ ನಿರತ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯು ಮೇ 22ರಂದು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಶಾಖೆ ಬೆಂಬಲ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಸಂಘದ ಎಲ್ಲಾ ವೈದ್ಯರು ಆ ದಿನ ತಮ್ಮ ಹೊರರೋಗಿ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಸಾರ್ವಜನಿಕರಿಗೆ ತೊಂದರೆಯಾಗ ದಂತೆ ತುರ್ತು ಚಿಕಿತ್ಸಾ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಉಡುಪಿ ಕರಾವಳಿಯ ಹೆಚ್ಚಿನ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಉಡುಪಿ ಕರಾವಳಿ ಶಾಖೆಯ ಅಧ್ಯಕ್ಷರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





