8 ವಿಧಾನ ಪರಿಷತ್ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಲು ಪಟ್ಟು
ಬೆಂಗಳೂರು, ಮೇ 20: ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳೆಂದು ಗುರುತಿಸಿಕೊಂಡು ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್‌ನ 8 ಮಂದಿ ವಿಧಾನ ಪರಿಷತ್ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಪಾಲಿಕೆ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳೆಂದು ಗುರುತಿಸಿಕೊಂಡು ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್‌ನ 8 ಮಂದಿ ವಿಧಾನ ಪರಿಷತ್ ಸದಸ್ಯರು ರಾಜ್ಯದ ಇತರೆ ನಗರಗಳ ವಿಳಾಸ ನೀಡಿ ಅಕ್ರಮವಾಗಿ ಸಾರಿಗೆ ಭತ್ತೆ ಪಡೆಯುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ರಾಮಪ್ಪ ತಿಮ್ಮಾಪುರ, ರಘು ಆಚಾರ್, ಎನ್.ಎಸ್.ಭೋಸರಾಜ್, ಎಸ್.ರವಿ, ಎಂ.ಡಿ. ಲಕ್ಷ್ಮೀನಾರಾಯಣ್, ಸಿ.ಆರ್. ಮನೋಹರ್ ಮತ್ತು ಅಪ್ಪಾಜಿಗೌಡ ಅವರು 2016 ರಲ್ಲಿ ನಡೆದ ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಆದರೆ, ಅವರ ಸ್ವಂತ ಊರಿನ ವಿಳಾಸ ನೀಡಿ ಕಾನೂನು ಬಾಹಿರವಾಗಿ ಸಾರಿಗೆ ಭತ್ತೆ ಪಡೆಯುತ್ತಿದ್ದಾರೆ ಎಂದು ದೂರಿದರು.





