ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ, ಮೇ 20: ಪ್ರಕರಣವೊಂದಕ್ಕೆ ಸಂಬಂಧಿಸಿ ಜಾಮೀನಿನಿಂದ ಬಿಡಿಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಪುದು ಗ್ರಾಮದ ನಿವಾಸಿ ಆರಿಫ್(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯ ಕುರಿತಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
Next Story





