Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 18 ಕೋಟಿ ರೂ. ಜಾಹೀರಾತು ಕೊಡುಗೆ...

18 ಕೋಟಿ ರೂ. ಜಾಹೀರಾತು ಕೊಡುಗೆ ನಿರಾಕರಿಸಿದ ಪ್ರಭಾಸ್

ವಾರ್ತಾಭಾರತಿವಾರ್ತಾಭಾರತಿ21 May 2017 12:20 PM IST
share
18 ಕೋಟಿ ರೂ. ಜಾಹೀರಾತು ಕೊಡುಗೆ ನಿರಾಕರಿಸಿದ ಪ್ರಭಾಸ್

ಬಾಹುಬಲಿ 2 ಚಿತ್ರದ ಪ್ರಚಂಡ ಯಶಸ್ಸಿನ ಬಳಿಕ ಭಾರತೀಯ ಚಿತ್ರರಂಗದ ಅತ್ಯಂತ ಬೇಡಿಕೆಯ ತಾರೆಯೆನಿಸಿರುವ ಪ್ರಭಾಸ್‌ರನ್ನು ತಮ್ಮ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಮಾಡಲು ಹಲವು ವಾಣಿಜ್ಯ ಕಂಪೆನಿಗಳು ಮುಂದೆ ಬಂದಿದ್ದು, ಭಾರೀ ಮೊತ್ತದ ಸಂಭಾವನೆಯ ಕೊಡುಗೆಯನ್ನು ನೀಡಿವೆ. ಆದರೆ ಪ್ರಭಾಸ್, ಚಿತ್ರರಂಗದಲ್ಲೇ ತನ್ನ ಗಮನವನ್ನು ಕೇಂದ್ರೀಕರಿಸಲು ಬಯಸಿದ್ದು, ಜಾಹೀರಾತುಗಳಲ್ಲಿ ನಟಿಸಲು ಒಲ್ಲೆ ಎಂದಿದ್ದಾರೆ. ಜಾಹೀರಾತೊಂದರಲ್ಲಿ ನಟಿಸಲು ವಾಣಿಜ್ಯ ಕಂಪೆನಿಯೊಂದರ 18 ಕೋಟಿ ರೂ.ನ ಭಾರೀ ಸಂಭಾವನೆಯ ಕೊಡುಗೆಯನ್ನು ಕೂಡಾ ಪ್ರಭಾಸ್ ತಿರಸ್ಕರಿಸಿದ್ದಾರೆಂದು ಅವರ ವಕ್ತಾರರೊಬ್ಬರು ಬಹಿರಂಗಪಡಿಸಿದ್ದಾರೆ.

ಈ ಮಧ್ಯೆ ಅಮೆರಿಕ ಪ್ರವಾಸದಿಂದ ಮರಳಿ ಬಂದಿರುವ ಪ್ರಭಾಸ್, ‘ಸಾಹೋ’ ಎಂಬ ಬಿಗ್ ಬಜೆಟ್ ತೆಲುಗು ಚಿತ್ರಕ್ಕೆ ಬಣ್ಣ ಹಚ್ಚಲು ಸನ್ನದ್ಧರಾಗಿದ್ದಾರೆ. ಚಿತ್ರದ ಟೀಸರ್ ಕೂಡಾ ಬಿಡುಗಡೆಯಾಗಿದ್ದು, ಇದೊಂದು ಭರ್ಜರಿ ಆ್ಯಕ್ಷನ್ ಚಿತ್ರವಾಗಲಿದೆಯೆಂಬ ಸುಳಿವನ್ನು ನೀಡಿದೆ. ಜುಲೈನಲ್ಲಿ ಚಿತ್ರೀಕರಣ ಆರಂಭಿಸಲಿರುವ ‘ಸಾಹೋ’ ಚಿತ್ರದ ನಾಯಕಿಯಾಗಿ ಕತ್ರೀನಾ ಕೈಫ್ ಆಯ್ಕೆಯಾಗಿದ್ದಾರೆ. ಆದರೆ ಉಳಿದ ಪಾತ್ರಗಳ ಬಗ್ಗೆ ಇನ್ನೂ ಯಾವುದೇ ವಿವರಗಳು ಬಹಿರಂಗಗೊಂಡಿಲ್ಲ. ಸಾಹೋ ಚಿತ್ರದ ಜೊತೆಜೊತೆಗೆ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಅಭಿನಯದ ‘ಭಾಗ್‌ಮತಿ’ ಸೆಟ್ಟೇರಲು ಸಜ್ಜಾಗಿದೆ. ಮೊದಲಿಗೆ ‘ಭಾಗ್‌ಮತಿ’ ಐತಿಹಾಸಿಕ ಚಿತ್ರವೆಂಬ ಊಹಾಪೋಹಗಳಿದ್ದವಾದರೂ, ಚಿತ್ರತಂಡ ಅದನ್ನೀಗ ತಳ್ಳಿಹಾಕಿದೆ. ಇದೊಂದು ಥ್ರಿಲ್ಲರ್ ಕಥಾವಸ್ತುವಿರುವ ಚಿತ್ರವೆಂದು ಅದು ಸ್ಪಷ್ಟಪಡಿಸಿದೆ. ಇದೊಂದು ನಾಯಕಿ ಪ್ರಧಾನ ಚಿತ್ರವೆಂಬ ಮಾತೂ ಕೇಳಿಬರುತ್ತಿದೆ. ಬಾಹುಬಲಿ ಸರಣಿಯ ಚಿತ್ರಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಬೇರೆ ಯಾವುದೇ ಚಿತ್ರಗಳಲ್ಲಿ ನಟಿಸದೆ ಇದ್ದ ಪ್ರಭಾಸ್ ಈ ಚಿತ್ರಕ್ಕಾಗಿ ಕಾಲ್‌ಶೀಟ್ ನೀಡಲು ಒಪ್ಪಿಕೊಂಡಿದ್ದಾರೆ. ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದ್ದು, ಒಂದೆರಡು ತಿಂಗಳೊಳಗೆ ಶೂಟಿಂಗ್ ಆರಂಭಗೊಳ್ಳಲಿದೆ. ಪ್ರಭಾಸ್ ಅವರ ಆಪ್ತ ಮಿತ್ರರಾದ ಪ್ರಮೋದ್ ಉಪಾಲಪಟ್ಟಿ ಹಾಗೂ ವಂಶಿಕೃಷ್ಣ ರೆಡ್ಡಿ ‘ಭಾಗ್‌ಮತಿ’ಯನ್ನು ನಿರ್ಮಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X