ಮಾದಕ ವಸ್ತು ಮಾರಾಟ: ನೈಜೀರಿಯಾ ಪ್ರಜೆಗಳಿಬ್ಬರ ಬಂಧನ
ಬೆಂಗಳೂರು, ಮೇ 21: ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 25.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾದ ಅಭಿಯಾದ ನಿವಾಸಿಗಳಾದ ಚುಕುಮೆವಕಾ ಕ್ರೈಸ್ (34), ಇಮೊದ ಕ್ರಿಸ್ಟಿಯಾನ್ (29) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ನಗರದ ಟಿಸಿ ಪಾಳ್ಯ ಮುಖ್ಯರಸ್ತೆಯ 1ನೆ ಕ್ರಾಸ್‌ನಲ್ಲಿರುವ ಮನೆಯೊಂದನ್ನು ಬಾಡಿಗೆ ಪಡೆದುಕೊಂಡು ಅದರಲ್ಲಿ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರಿಂದ 25 ಸಾವಿರ ರೂ. ನಗದು, 50 ಗ್ರಾಂ ಕೊಕೇನ್, 10 ಮೊಬೈಲ್‌ಗಳು, 2 ಲ್ಯಾಪ್‌ಟಾಪ್, 2 ಪಾಸ್‌ಪೋರ್ಟ್, ಬೈಕ್ ಹಾಗೂ ಇತರ ವಸ್ತು ಸೇರಿ ಸುಮಾರು 25.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಇಲ್ಲಿನ ಕೆಆರ್‌ಪುರಂ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





