ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಕಾಪು, ಮೇ 21: ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ.
ಮೃತರನ್ನು ಜೋಸೆಫ್ ರೋಡ್ರಿಗಸ್ (62) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಮಣ್ಣು ರಸ್ತೆಯಲ್ಲಿ ಕಟಪಾಡಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಜೋಸೆಫ್ ರೋಡ್ರಿಗಸ್ ರಿಗೆ ಹಿಂಬದಿ ಯಿಂದ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





