Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೇಪ್ ಕುಖ್ಯಾತಿ ಹರಿಸ್ವಾಮಿಯ ರಿಯಲ್...

ರೇಪ್ ಕುಖ್ಯಾತಿ ಹರಿಸ್ವಾಮಿಯ ರಿಯಲ್ ಎಸ್ಟೇಟ್, ಬೇನಾಮಿ ವ್ಯವಹಾರ ತನಿಖೆ

ವಾರ್ತಾಭಾರತಿವಾರ್ತಾಭಾರತಿ22 May 2017 4:38 PM IST
share
ರೇಪ್ ಕುಖ್ಯಾತಿ ಹರಿಸ್ವಾಮಿಯ ರಿಯಲ್ ಎಸ್ಟೇಟ್, ಬೇನಾಮಿ ವ್ಯವಹಾರ ತನಿಖೆ

ತಿರುವನಂತಪುರಂ,ಮೇ 22: ಅತ್ಯಾಚಾರಕ್ಕೆ ಯತ್ನಿಸಿ, ಹುಡುಗಿಯಿಂದ ಮರ್ಮಾಂಗವನ್ನು ಕತ್ತರಿಸಿಕೊಂಡ ಗಂಗೇಶಾನಂದ ತೀರ್ಥಪಾದ ಯಾನೆ ಹರಿಸ್ವಾಮಿಗೆ ಕೊಟ್ಯಂತರ ರೂಪಾಯಿ ರಿಯಲ್ ಎಸ್ಟೇಟ್ ವ್ಯವಹಾರ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಪನ್ಮನ ಆಶ್ರಮದ ಮಠಾಧಿಪತಿ ಎನ್ನುವ ನಿಟ್ಟನಲ್ಲಿಸ್ವಾಮಿ ರಿಯಲ್ ಎಸ್ಟೇಟ್ ಮತ್ತು ಹೊಟೇಲ್ ವ್ಯವಹಾರ ನಡೆಸುತ್ತಿದ್ದರು.

ಕೊಲಂಚೇರಿಯ ಹೊಟೇಲ್ ವ್ಯವಹಾರ, ವಯನಾಡ್‌ನ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಸ್ವಾಮಿ ಪಾಲುದಾರರಾಗಿದ್ದು, ಈತನಿಂದ ಕಿರುಕುಳಕ್ಕೊಳಗಾದ ಯುವತಿಯ ತಂದೆ ತಾಯಿಯಿಂದ 40ಲಕ್ಷ ರೂಪಾಯಿ ಮತ್ತು ಕಾರನ್ನು ತೆಗೆದುಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಹುಡುಗಿಯ ತಂದೆ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದು, ನಿವೃತ್ತಿವೇಳೆ ಸಿಕ್ಕಿದ 30ಲಕ್ಷ ರೂಪಾಯಿ ಹಾಗೂ ಸೊಸೈಟಿಯಿಂದ ಹತ್ತುಲಕ್ಷ ಸಾಲ ತೆಗೆದು ವ್ಯಾಪಾರಕ್ಕೆಂದು ಸ್ವಾಮಿಗೆ ಕೊಟ್ಟಿದ್ದರು ಹುಡುಗಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ವಾಮಿಯ ವ್ಯವಹಾರಗಳಲ್ಲಿ ಪಾಲುದಾರನಾಗಿ ಮಾಡುವ ಭರವಸೆಕೊಟ್ಟು ಹಣ ಮತ್ತು ಕಾರನ್ನು ಸ್ವಾಮಿ ಲಪಟಾಯಿಸಿದ್ದಾರೆ. ಈ ನಡುವೆ ಹುಡುಗಿಯ ತಂದೆಗೆ ಹೃದಯಾಘಾತವಾಗಿತ್ತು. ಆದ್ದರಿಂದ ಅತ್ತಿತ್ತ ಹೋಗಲು ಕಾರು ಖರೀದಿಸಲಾಯಿತು. ಆದರೆ ವ್ಯವಹಾರಕ್ಕೆ ಅಗತ್ಯವಿದೆಎಂದು ಕಾರನ್ನು ಕೂಡಾ ಸ್ವಾಮಿ ಕೊಂಡು ಹೋಗಿದ್ದಾರೆ. ಆದರೆ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಷಯ ತನಗೆಗೊತ್ತಿಲ್ಲ ಎಂದು ಹುಡುಗಿಯ ತಾಯಿ ಹೇಳಿದ್ದಾರೆ.

ವಯನಾಡ್ ರಿಯಲ್ ಎಸ್ಟೇಟ್‌ನಲ್ಲಿ ಪಾಲುದಾರರಾಗಿ ಮಾಡುತ್ತೇವೆಂದು ಹೇಳಿ ಈತ ಹಲವರಿಂದ ಹಣವನ್ನು ಪೀಕಿಸಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಯಾರು ಕೂಡಾ ದೂರು ನೀಡಿಲ್ಲ.

 ತನಗೆ ಹದಿನೇಳು ವರ್ಷ ಆಗಿದ್ದಾಗ ಲೈಂಗಿಕ ಕಿರುಕುಳ ನೀಡತೊಡಗಿದ್ದ ಸ್ವಾಮಿ ಕಳೆದ ಒಂದೂವರೆ ವರ್ಷಗಳಿಂದ ದೂರವಿದ್ದ. ಇದಕ್ಕೆ ತಂದೆತಾಯಿ ಮತ್ತು ಸ್ವಾಮಿಯ ಆರ್ಥಿಕ ವಹಿವಾಟು ಕಾರಣವಾಗಿತ್ತು. ಒಂದೂವರೆ ವರ್ಷದ ಕೋಪ ರಾಜಿಯಾಗಬೇಕು. ಅದಕ್ಕೆ ಸಹಕರಿಸಬೇಕೆಂದು ಹೇಳಿ ಕಳೆದ ಶುಕ್ರವಾರ ರಾತ್ರಿ ಸ್ವಾಮಿ ತನ್ನನ್ನು ಸಮೀಪಿಸಿದ್ದ ಎಂದು ಹುಡುಗಿ ಪೊಲೀಸರಿಗೆ ತಿಳಿಸಿದ್ದಾಳೆ. ಅದೇ ಸಂದರ್ಭದಲ್ಲಿ ಸ್ವಾಮಿಯ ಮರ್ಮಾಂಗವನ್ನು ಕತ್ತರಿಸಿ ಅವಳು ಪೊಲೀಸರ ಮೊರೆಹೋಗಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X