ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಮೇ 22: ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿನಿತ್ಯ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿಲ್ಲಿ ನಿರಾಕರಿಸಿದ್ದಾರೆ.
ಸೋಮವಾರ ವಿಧಾನ ಸೌಧದಲ್ಲಿನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸೇರುವ ಮುನ್ನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದೆ. ಆ ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ನನಗೆ ಮುಸ್ಲಿಂ ನಾಯಕರೊಬ್ಬರು ಸಹಾಯ ಮಾಡಿದ್ದಾರೆ ಎಂದರು. ‘ಕಾಂಗ್ರೆಸ್ ಸೇರಲು ಪ್ರಮುಖ ಪಾತ್ರ ವಹಿಸಿದ್ದ ನಾಯಕರನ್ನು ಮರೆತಿದ್ದೀರಾ’ ಎಂಬ ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿಕೆಗೆ ತಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದರು.
Next Story





