ರಾಜ್ಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಹೆಜಮಾಡಿ

ಕಾಪು, ಮೇ 22: ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿ ಆಂತರಿಕ ಚುನಾವಣೆಯಲ್ಲಿ ಅಬ್ದುಲ್ ಅಝೀಝ್ ಹೆಜಮಾಡಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರು ಸಹಿತ ಒಟ್ಟು 52 ಸ್ಪರ್ಧಿಗಳಿದ್ದು, 7,189 ಮತಗಳನ್ನು ಪಡೆದು ಎಲ್ಲಾ ಅಭ್ಯರ್ಥಿಗಳಿಗಿಂತಲೂ ಅತ್ಯಂತ ಅಧಿಕ ಮತ ಪಡೆದವರಾಗಿದ್ದಾರೆ.
ಎನ್‌ಎಸ್‌ಯುಐ, ಯುವಕಾಂಗ್ರೆಸ್, ಪ್ರಸ್ತುತ ಕಾಪು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.
ಸಂಘಟನಾತ್ಮಕವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿರುವ ಇವರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಕ್ರೀಡಾ ಸೇವೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಈ ಮೊದಲು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದರು.
Next Story