ವಿದ್ಯುತ್ ತಗುಲಿ ವಿದ್ಯಾರ್ಥಿ ಮೃತ್ಯು
ಬೆಂಗಳೂರು, ಮೇ 23: ವಿದ್ಯುತ್ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಸಿಟಿ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಪಾದರಾಯನಪುರದ 13ನೆ ಕ್ರಾಸ್ನ ಮುಹಮ್ಮದ್ ನವಾಝ್ (16) ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಶಾಲೆಯೊಂದರಲ್ಲಿ 10ನೆ ತರಗತಿ ಓದುತ್ತಿದ್ದ ನವಾಝ್ ಸೋಮವಾರ ರಾತ್ರಿ 11ರ ಸುಮಾರಿಗೆ ಸಿಟಿ ಮಾರುಕಟ್ಟೆಯ ಗಣಪತಿ ದೇವಾಲಯದ ಬಳಿ ಅಳವಡಿಸಿದ್ದ ಗ್ರಿಲ್ ಮುಟ್ಟಿದ್ದಾನೆ. ಮಳೆಯಿಂದ ಗ್ರಿಲ್ನಲ್ಲಿ ವಿದ್ಯುತ್ ಪ್ರವಹಿಸಿದ್ದು, ಗ್ರಿಲ್ ಮುಟ್ಟಿದ ನವಾಝ್ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದಾನೆ ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗದ ಮಧ್ಯೆ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story