Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರಾವಳಿ ಜಿಲ್ಲೆಗಳ ಕಾಂಗ್ರೆಸ್ ನಾಯಕರ...

ಕರಾವಳಿ ಜಿಲ್ಲೆಗಳ ಕಾಂಗ್ರೆಸ್ ನಾಯಕರ ವಿರುದ್ಧ ವೇಣುಗೋಪಾಲ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ24 May 2017 7:25 PM IST
share

ಬೆಂಗಳೂರು, ಮೇ 24: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಜಿಲ್ಲೆಯ ನಾಯಕರು ವಿಫಲರಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳ ಮುಖಂಡರು, ಸಚಿವರು, ಶಾಸಕರ ಸಮಾಲೋಚನಾ ಸಭೆಯಲ್ಲಿ ವೇಣುಗೋ ಪಾಲ್ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ವನ್ನು ಬಲವರ್ಧಿಸಬೇಕಾಗಿದೆ. ಬಿಜೆಪಿಯವರ ಪಾಲಿಗೆ ಕರಾವಳಿ ಭದ್ರಕೋಟೆಯಾಗಿ ಪರಿವರ್ತನೆಯಾಗಿದೆ. ಯಾವುದೇ ಚುನಾವಣೆಯಿದ್ದರೂ ಬಿಜೆಪಿಯವರಿಗೆ ಹೆಚ್ಚಿನ ಸ್ಥಾನಗಳು ಸಿಗುತ್ತಿವೆ. ಇನ್ನೊಂದು ವರ್ಷದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಎದುರಾಗಲಿರುವುದರಿಂದ ಪಕ್ಷ ಸಂಘಟನೆಯನ್ನು ಮುಖಂಡರು ಚುರುಕುಗೊಳಿಸಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿದ್ದಾರೆ.

ಎರಡು ಜಿಲ್ಲೆಗಳ ಶಾಸಕರು ತಮ್ಮ ತಮ್ಮ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಜಿಲ್ಲಾ ಮಟ್ಟದಲ್ಲಿ ಪಕ್ಷದ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಹಿರಂಗವಾಗಿ, ಮಾಧ್ಯಮಗಳ ಎದುರು ಹೇಳಿಕೆಗಳನ್ನು ನೀಡಬಾರದು. ಎಲ್ಲವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಆಶ್ಚರ್ಯಕರ ಸಂಗತಿ ಎಂದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರ ವಿರುದ್ಧ ವೇಣುಗೋಪಾಲ್ ತಮ್ಮ ಅಸಮಾಧಾನ ಹೊರಹಾಕುತ್ತಿದ್ದರೂ, ಯಾರೊಬ್ಬರೂ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೆಸರನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದು ಬಂದಿದೆ.

ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿರಂತರವಾಗಿ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಜನಾರ್ದನ ಪೂಜಾರಿ ವಿಚಾರವು ಸಭೆಯಲ್ಲಿ ಪ್ರಸ್ತಾಪವಾಗದಂತೆ ಮಂಗಳೂರು ಭಾಗದ ಎಲ್ಲ ಮುಖಂಡರು ಮೊದಲೆ ನಿರ್ಧರಿಸಿ ದ್ದರು ಎನ್ನಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮರ್ಥ್ಯ ಹೆಚ್ಚಿದೆ. ಆದರೂ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿಯ ಮತಗಳಿಕೆ ಸಾಮರ್ಥ್ಯ ಹೆಚ್ಚುತ್ತಿದೆ. ಮುಂದಿನ ಚುನಾವಣೆಯು ನಮಗೆ ಸವಾಲು ತಂದಿಡಬಹುದು. ಆದುದರಿಂದ, ಈಗಿನಿಂದಲೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಲು ಜಿಲ್ಲಾ ನಾಯಕರು ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಸಮಾಲೋಚನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X