ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 24: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೆ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕ್ರೀಡಾಪಟುಗಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕಾಗಿ ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ನೀಡುವುದಕ್ಕಾಗಿ ರಾಜ್ಯ/ರಾಷ್ಟ್ರ/ಅಂತಾರಾಷ್ಟ್ರ ಮಟ್ಟದಲ್ಲಿ ಪದಕ ಪಡೆದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಯೋಜನೆ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಆದ್ದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅರ್ಹ ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ತಾವು ಮಾಡಿರುವ ಸಾಧನೆಗಳ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಈ ಕಚೇರಿ ಗೆ ಜೂ.10ರೊಳಗೆ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (ದೂರವಾಣಿ: 0820-2521324 ಅಥವಾ 9480886467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.