ಓಮ್ನಿ- ಬೈಕ್ ಢಿಕ್ಕಿ: ಸವಾರ ಮೃತ್ಯು
ಕಾರ್ಕಳ, ಮೇ 24: ಬಂಡಿಮಠ ಮೂಡುಮಹಾಗಣಪತಿ ದೇವಸ್ಥಾನದ ಓಮ್ನಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮಹಿಳೆಯೊಬ್ಬರು ಗಂಭೀರವಾಗಿ ಗಾಯ ಗೊಂಡಿದ್ದಾರೆ.
ಮೃತರನ್ನು ಬೈಕ್ ಸವಾರ ಸುಭಾಶ್ಚಂದ್ರ ಭಟ್ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿದ್ದ ಮೀರಬಾಯಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಕಳ ಪೇಟೆ ಕಡೆಯಿಂದ ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತು. ಇದರಿಂದ ಸವಾರರಿಬ್ಬರು ಡಾಮಾರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಇವರಲ್ಲಿ ಸುಭಾಶ್ಚಂದ್ರ ಭಟ್ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





