ಮೇ 29ರಂದು ಪಿಎಲ್‌ಡಿ ಬ್ಯಾಂಕಿನ ವಿಸೃತ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ, ಮೇ 24: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ವಿಸೃತ ಕಟ್ಟಡದ ಉದ್ಘಾಟನೆ ಮೇ 29ರಂದು ಬೆಳಗ್ಗೆ 10:30ಕ್ಕೆ ನಡೆಯಲಿದ್ದು, ಬಳಿಕ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ. ಈಶ್ವರ್ ಭಟ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕ.ರಾ.ಸ.ಕೃ. ಮತ್ತು ಗ್ರಾ.ಅ.ಬ್ಯಾಂಕ್ ಅಧ್ಯಕ್ಷ ತಿಪಟೂರು ಶಾಸಕ ಕೆ.ಷಡಕ್ಷರಿ ಅಕ್ಷಯ ನಿಧಿ ಎಂಬ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುಮಾರು 50 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ. ನವೀಕೃತ ಕಚೇರಿಯನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ., ಭದ್ರತಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್‌ಕಟೀಲು, 2ನೆ ಮಹಡಿಯಲ್ಲಿನ ಡಾ.ಬಿ. ನಾರಾಯಣ ರಾವ್ ಸಭಾಭವನವನ್ನು ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಲಿದ್ದಾರೆ. ದ.ಕ.ಜಿ.ಕೇಂದ್ರ ಸ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸಮ್ಮಾನಿಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಬ್ಯಾಂಕಿನ ಕಾರ್ಯ ನಿರ್ವಹಣಾಧಿಕಾರಿ ವೆಂಕಪ್ಪಯ್ಯ, ನಿರ್ದೇಶಕ ನವೀನ್ ರೈ ಇದ್ದರು.







