ಬಂದರ್: ಮುಳುಗಿದ ಬೋಟ್; 10 ಮೀನುಗಾರರ ರಕ್ಷಣೆ

ಮಂಗಳೂರು, ಮೇ 25: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಗಿಲ್ನೆಟ್ ಬೋಟ್‌ವೊಂದು ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಮುಳುಗಿದ ಘಟನೆ ದಕ್ಕೆ ಸಮೀಪದ ಅಳಿವೆಬಾಗಿಲು ಬಳಿ ನಿನ್ನೆ ಸಂಜೆ ನಡೆದಿದೆ.
ಈ ವೇಳೆ ಸಮುದ್ರದಲ್ಲಿ ಮುಳುಗುತ್ತಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಲೋಕನಾಥ ಬೋಳಾರ್ ಎಂಬವರಿಗೆ ಸೇರಿದ ಬೋಟ್ ಇದಾಗಿತ್ತು. ಕೆಲ ದಿನಗಳ ಹಿಂದೆ ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಈ ಬೋಟ್ ನಿನ್ನೆ ಸಂಜೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೋಟ್ ಅಳಿವೆಬಾಗಿಲು ಬಳಿ ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಹಾನಿಗೊಂಡಿದೆ. ಬಳಿಕ ಬೋಟ್ ಮುಳುಗಲಾರಂಭಿಸಿದೆ. ಈ ವೇಳೆ ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.
ಬೋಟ್ ಮುಳುಗಿದ್ದರಿಂದ ಸುಮಾರು 70 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಈ ಬಗ್ಗೆ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





