ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಪ್ರಿಯಾಂಕ

ಉಡುಪಿ, ಮೇ 25: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಮೂಲಕ ಉಡುಪಿಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡ ಲಾಗುವುದು. ಇದಕ್ಕೆ ಜಿಲ್ಲೆಯ ಎಲ್ಲಾ ನಾಗರಿಕರು ಮತ್ತು ವರ್ತಕರು ಜಿಲ್ಲಾಡ ಳಿತದೊಂದಿಗೆ ಸಹಕರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
ಉಡುಪಿ ನಗರಸಭೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಗುರುವಾರ ಉಡುಪಿ ನಗರ ಸಭೆ ಆವರಣದಲ್ಲಿ ಆಯೋಜಿಸಲಾದ ಪ್ಲಾಸ್ಟಿಕ್ ಕುರಿತ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ರಾಜ್ಯದಲ್ಲಿ ಪ್ಲಾಸ್ಟಿಕ್ ಕೈಚೀಲ, ಬ್ಯಾನರ್, ಪ್ಲೆಕ್ಸ್‌ಗಳ ಸೇರಿದಂತೆ ಎಲ್ಲ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಎಲ್ಲಾ ನಾಗರಿಕರು ಮತ್ತು ವರ್ತಕರು ದಿನ ನಿತ್ಯದ ಬಳಕೆಗೆ ಪೇಪರ್‌ನಿಂದ ಆಥವಾ ಬಟ್ಟೆಯಿಂದ ತಯಾರಿಸಿದ ಕೈ ಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ವರ್ತಕರಿಗೆ ಮತ್ತು ನಾಗರಿಕರಿಗೆ ಅರಿವು ಮೂಡಿಸಲು ಈ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಾಥಾದಲ್ಲಿ ವರ್ತಕರಿಗೆ ಹಾಗೂ ನಾಗರಿಕರಿಗೆ ಬಟ್ಟೆಯ ಕೈ ಚೀಲಗಳನ್ನು ವಿತರಿಸಲಾಗು ವುದು. ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವುದು ನಮ್ಮ ಮುಖ್ಯ ಗುರಿಯಾ ಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ಅಧಿಕಾರಿಗಳು ಉಪಸ್ಥಿತರಿ ದ್ದರು. ನಗರಸಭೆ ಪರಿಸರ ಇಂಜಿನಿಯರ್ ಾಘವೇಂದ್ರ ಸ್ವಾಗತಿಸಿ, ವಂದಿಸಿ ದರು.







