Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದುಬೈ: ಅಂತಾರಾಷ್ಟ್ರೀಯ ಕುರ್‌ಆನ್...

ದುಬೈ: ಅಂತಾರಾಷ್ಟ್ರೀಯ ಕುರ್‌ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ25 May 2017 6:30 PM IST
share
ದುಬೈ: ಅಂತಾರಾಷ್ಟ್ರೀಯ ಕುರ್‌ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಶಸ್ತಿ

ಭಟ್ಕಳ, ಮೇ 25: ಇತ್ತೀಚೆಗೆ ದುಬೈಯಲ್ಲಿ ನಡೆದ 12ನೆ ಕುರ್‌ಆನ್ ಸ್ಪರ್ಧೆಯಲ್ಲಿ ಭಟ್ಕಳ ಮೂಲದ ಸಹೋದರಿಯರಾದ ಫಾತಿಮಾ ಮೊಹತೆಶಮ್ ಹಾಗೂ ಆಯಿಶಾ ಮೊಹತೆಶಮ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು ಗಳಿಸಿ ಸಾಧನೆ ಮೆರೆದಿದ್ದಾರೆ.

ಕೆಲ ವರ್ಷಗಳ ಹಿಂದೆ ಈ ಸಹೋದರಿಯರ ತಾಯಿ ಫಾಯಿಝಾ ಮೊಹತೆಶಮ್ ಕೂಡ ಕುರ್‌ಆನ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗಳಿಸುವ ಮೂಲಕ ಭಟ್ಕಳದ ಕೀರ್ತಿಯನ್ನು ಗಲ್ಫ್ ರಾಷ್ಟ್ರಗಳಲ್ಲಿ ಪಸರಿಸಿದ್ದರು.

ಮುಹಮ್ಮದ್ ಬಿನ್ ರಾಷಿದ್ ಸೆಂಟರ್ ಫಾರ್ ಕಲ್ಚರಲ್ ಆ್ಯಂಡ್ ಸೋಶಿಯಲ್ ಅಂಡರ್‌ಸ್ಟ್ಯಾಂಡಿಂಗ್ ಸಂಸ್ಥೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಟ್ಕಳದ ಮೊಹತೆಶಮ್ ಸಹೋದರಿಯರು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿವಿಧ ದೇಶಗಳ ಸ್ಪರ್ಧಾಳುಗಳು ಭಾಗವಹಿಸಿದ್ದು, ಅಂತಿಮ ಫಲಿತಾಂಶದಲ್ಲಿ ಮೊಹತೆಶಮ್ ಸಹೋದರಿಯರು ಪ್ರಶಸ್ತಿ ಗಳಿಸಿದ್ದಾರೆ. ಶೇಖ್ ಸಈದ್ ಬಿನ್ ಹಷರ್ ಅಲ್ ಮಖ್ತೂಮ್ ಅವರು ಫಾತಿಮಾ ಮೊಹತೆಶಮ್ ಹಾಗೂ ಆಯಿಶಾ ಮೊಹತೆಶಮ್ ಅವರಿಗೆ "ದುಬೈ ಇಂಟರ್ ನ್ಯಾಶನಲ್ ಹೋಲಿ ಕುರ್‌ಆನ್ ಅವಾರ್ಡ್" ನೀಡಿ ಗೌರವಿಸಿದರು. 

ಈ ಬಗ್ಗೆ ಪ್ರತಿಕ್ರಿಯಿಸಿದ ಸಹೋದರಿಯರ ತಂದೆ ಜಾನ್ ಸಿದ್ದೀಕ್ ಮೊಹತೆಶಮ್, ಫಾತಿಮಾ 12ನೇ ವರ್ಷದಲ್ಲಿ ಹಾಗೂ ಕಿರಿಯ ಪುತ್ರಿ ಆಯಿಶಾ ತನ್ನ 11ನೆ ವಯಸ್ಸಿನಲ್ಲಿ ಕುರ್‌ಆನ್ ಸಂಪೂರ್ಣವಾಗಿ ಕಂಠಪಾಠ ಮಾಡಿದ್ದರು. ಇಬ್ಬರಿಗೂ ತಾಯಿಯ ಪ್ರೋತ್ಸಾಹ ಹಾಗೂ ತರಬೇತಿಯಿತ್ತು. ಫಾತಿಮಾ ಹಲವಾರು ಕುರ್‌ಆನ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಳು. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಫಾತಿಮಾ ಹಾಗೂ 5ನೇ ತರಗತಿಯಲ್ಲಿ ಓದುತ್ತಿರುವ ಆಯಿಶಾ ದುಬೈಯ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳಾಗಿದ್ದಾರೆ. ಇವರ ಮಾತೃಭಾಷೆ ನವಾಯತಿ ಆಗಿದ್ದರೂ ಸಹ ಅರಬಿಕ್ ಭಾಷೆಯಲ್ಲಿ ಪ್ರಭುತ್ವವನ್ನು ಪಡೆದುಕೊಂಡಿದ್ದಾರೆ ಎಂದರು.

ಕುರ್‌ಆನ್ ದೈವೀಕ ಗ್ರಂಥವಾಗಿದೆ. ಇದು ಮನುಷ್ಯರ ಮಾರ್ಗದರ್ಶನಕ್ಕಾಗಿ ಅವತ್ತೀರ್ಣವಾಗಿದ್ದು, ಸೃಷ್ಟಿಕರ್ತನ ಅನುಗ್ರಹದಿಂದ ಇಂತಹ ಗೌರವ ಒಲಿದುಬಂದಿದೆ. ಇದಕ್ಕಾಗಿ ನನ್ನ ಪಾಲಕರು, ಶಿಕ್ಷಕರು ತ್ಯಾಗ ಬಹಳಷ್ಟಿದೆ ಎಂದು ಫಾತಿಮಾ ಹೇಳಿದ್ದಾರೆ. 

ಇಬ್ಬರು ಸಹೋದರಿಯರ ಸಾಧನೆಗೆ ಇಲ್ಲಿನ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ಅಲ್ತಾಫ್ ಖರೂರಿ ಸೇರಿದಂತೆ ದುಬೈಯ ಜಮಾಅತ್ ಪದಾಧಿಕಾರಿಗಳು, ಎಸ್.ಎಂ.ಸೈಯದ್ ಖಲೀಲುರ್ರಹ್ಮಾನ್, ಮುಹಮ್ಮದ್ ಅಶ್ಫಾಖ್ ಸಾದಾ, ಮುಹಮ್ಮದ್ ಯೂಸೂಫ್ ಬರ್ಮಾವರ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X