ಚಾಮರಾಜನಗರ : ಡಾ. ರೋಹಿಣಿ ಕಟೌಚ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಚಾಮರಾಜನಗರ,ಮೇ 25 : ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ರೋಹಿಣಿ ಕಟೋಚ್‌ರವರನ್ನು ರಾಜ್ಯ ಸರ್ಕಾರ ನಿಯೋನೆಗೊಳಿಸಿದ್ದು, ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್‌ರವರನ್ನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕುಲದೀಪ್‌ಕುಮಾರ್ ಆರ್. ಜೈನ್ ರವರು ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಗಟ್ಟುವಲ್ಲಿ ಸಫಲರಾಗಿದ್ದರು, ಇವರು ಅಕ್ರಮ ಕರಿಕಲ್ಲು ಗಣಿ ಮಾಲೀಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೂ ಸಹ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮತ್ತು ಕರಿಕಲ್ಲು ಸಾಗಾಣಿಕೆ ಮತ್ತಿತ್ತರ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದರು.
ಸರ್ಕಾರ ಇವರನ್ನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.
Next Story





