Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ:...

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಕೆ.ಸಿ.ವೇಣುಗೋಪಾಲ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಜನ ಮೆಚ್ಚುವ ಆಡಳಿತ

ವಾರ್ತಾಭಾರತಿವಾರ್ತಾಭಾರತಿ25 May 2017 7:27 PM IST
share
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನ ಮೆಚ್ಚುವ ಆಡಳಿತವನ್ನು ನೀಡಿರುವುದರಿಂದ 2018ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭವಿಷ್ಯ ನುಡಿದಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೇಣುಗೋಪಾಲ್ ಅವರು, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯದಂತಹ ಹಲವು ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಈ ಹಿನ್ನೆಲೆಯಲ್ಲಿ 2018ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದ ಕಾಂಗ್ರೆಸ್ ಶಾಸಕರು, ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರೊಂದಿಗೆ ನಾಲ್ಕು ದಿನಗಳಿಂದ ನಿರಂತರವಾಗಿ ಸಭೆ ನಡೆಸಲಾಗಿದೆ. ಹಾಗೂ ಜಿಲ್ಲಾ ಸಮಿತಿಗಳಲ್ಲಿದ್ದ ಸಣ್ಣ ಪುಟ್ಟ ಸಮಸ್ಯೆಗಳನ್ನೂ ಬಗೆಹರಿಸಲಾಗಿದೆ ಎಂದು ಹೇಳಿದರು.

ಜೂನ್ 30ರ ಒಳಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಗೆ ಒತ್ತು ನೀಡಲಾಗುವುದು. ಹಾಗೂ ಪಕ್ಷವನ್ನು ಸಂಘಟಿಸಲು ಜುಲೈ ತಿಂಗಳಲ್ಲಿ ರಾಯಚೂರಿನಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ. ಅಲ್ಲದೆ, ಇಂದಿರಾಗಾಂಧಿ ಹೆಸರಿನಲ್ಲಿ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ನಾಯಕತ್ವ ಮತ್ತು ಪಕ್ಷದ ವಿರುದ್ಧ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದರೆ ಅಂತಹವರ ವಿರುದ್ಧ ಯಾವುದೇ ಮುಲಾಜಿಗೂ ಒಳಗಾಗದೆ ಶಿಸ್ತು ಕ್ರಮ ಜರುಗಿಸಲಾಗುವುದು. ಹಾಗೊಂದು ಬಾರಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕೆಂದರೆ ನಮ್ಮ ಬಳಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಬೇಕೆಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ಶ್ರಮಿಸಲಿಲ್ಲ. ಆದರೆ, ಈಗ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಮಾಡುತ್ತೇವೆ ಎಂಬ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ, ಅಹಿಂದ ಜನಾಂಗ ಬಿಜೆಪಿ ಪಕ್ಷದ ಸುಳ್ಳು ಭರವಸೆಗಳನ್ನು ನಂಬಬಾರದು ಎಂದು ಹೇಳಿದರು.

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೀ ಆರೋಪಗಳನ್ನು ಮಾಡುತ್ತಿದ್ದಾರೆಯೇ ವಿನಹ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಹೀಗಾಗಿ, ತನಿಖೆ ಬಳಿಕ ಇದರ ಬಗ್ಗೆ ಸತ್ಯ ಹೊರ ಬರಲಿದೆ ಎಂದು ಹೇಳಿರು.

ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಅವರು ಜೆಡಿಎಸ್ ಪಕ್ಷವನ್ನು ಸೇರುವ ಮಾತುಗಳು ಕೇಳಿ ಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್ ಅವರು ನಮಗೆ ಪ್ರತಿಯೊಬ್ಬ ಮುಖಂಡರೂ ಮುಖ್ಯ ಹಾಗೂ ಅವರಿಂದ ಶಿಸ್ತನ್ನೂ ಬಯಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮೈಸೂರು ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗೂ ಎಚ್.ವಿಶ್ವನಾಥ್ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು  ಹೇಳಿದರು.

 ‘ಮೇ 31ರೊಳಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ  ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸುವುದಿಲ್ಲ. ಆದರೆ, ಯಾರ ನಾಯಕತ್ವದಲ್ಲಿ ಚುನಾವಣೆಯನ್ನು ನಡೆಸುತ್ತೇವೆ ಎಂಬುದರ ಬಗ್ಗೆ ಮೇ 31ರೊಳಗೆ ಘೋಷಣೆ ಮಾಡುತ್ತೇವೆ.’

-ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X