Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ...

ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಇನಾಯತುಲ್ಲಾ ಶಾಂಬಂದ್ರಿ ಸೂಕ್ತ ಅಭ್ಯರ್ಥಿ: ಜೆಡಿಎಸ್ ವೀಕ್ಷಕರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ25 May 2017 7:39 PM IST
share
ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಇನಾಯತುಲ್ಲಾ ಶಾಂಬಂದ್ರಿ ಸೂಕ್ತ ಅಭ್ಯರ್ಥಿ: ಜೆಡಿಎಸ್ ವೀಕ್ಷಕರ ಅಭಿಮತ

ಭಟ್ಕಳ,ಮೇ 25: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಬಾರಿ ಅತಿ ಕಡಿಮೆ ಅಂತರದಿಂದ ಎರಡನೇ ಸ್ಥಾನದಲ್ಲಿದ್ದ ಇನಾಯತುಲ್ಲಾ ಶಾಬಂದ್ರಿಯೇ ಮುಂದಿನ ಚುನಾವಣೆಗೆ ಸೂಕ್ತ ಅಭ್ಯರ್ಥಿ ಎಂದು ಜೆ.ಡಿ.ಎಸ್. ವೀಕ್ಷಕ ವಿಧಾನಪರಿಷತ್ ಉಪಸಭಾಪತಿ ಮರಿತಿಪ್ಪೆಗೌಡ ಹೇಳಿದರು.

ಅವರು ಬುಧವಾರ ಸಂಜೆ ಇಲ್ಲಿನ ಖಾಸಗಿ ಹೋಟೇಲ್ ನಲ್ಲಿ ಕಾರ್ಯಕರ್ತರ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.

ಉತ್ತರಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದು ಕನಿಷ್ಠ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸಬಲ್ಲದು ಎಂದ ಅವರು ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿಯೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಅಭಿಪ್ರಾಯಿಸಿದರು.

ಉತ್ತರಕನ್ನಡ ಜಿಲ್ಲೆಯಲ್ಲಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಅಪಾರ ಅಭಿಮಾನಿಗಳು, ಕಾರ್ಯಕರ್ತರಿದ್ದು ಈ ಜಿಲ್ಲೆ ನಾಯಕತ್ವದ ಕೊರತೆಯನ್ನು ಅನುಭವಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಭಟ್ಕಳದಲ್ಲಿ ಗೆಲ್ಲುವ ಅಭ್ಯರ್ಥಿ ಇನಾಯತುಲ್ಲಾ ಶಾಬಂದ್ರಿಯವರ ಸೋಲಿಗೆ ಜೆ.ಡಿ.ಎಸ್ ಮುಖಂಡರ ನಿಷ್ಕಾಳಜಿಯೆ ಕಾರಣವಾಗಿದೆ ಎಂದು ಒಪ್ಪಿಕೊಂಡ ಅವರು, ಈ ಬಾರಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಉತ್ತರಕನ್ನಡ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆಯನ್ನು ಎದುರಿಸಲಿದ್ದಾರೆ. ಇದಕ್ಕಾಗಿ ಈಗಿಂದಲೆ ಸಕಲ ಸಿದ್ದತೆಗಳನ್ನು ನಡೆಸುತ್ತಿದ್ದು ಜೂನ್ ತಿಂಗಳ ಅಂತ್ಯದೊಳಗೆ ಸುಮಾರು 20 ರಿಂದ 24 ಸಾವಿರ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು, ಬೂತ್ ಮಟ್ಟದಿಂದ ಗ್ರಾಮ, ತಾಲೂಕು, ಜಿಲ್ಲಾ, ವಾರ್ಡುವಾರು ಪದಾಧಿಕಾರಿಗಳನ್ನು ನೇಮಿಸಿ ಪ್ರತಿ ಮನೆಗೆ ಭೇಟಿ ನೀಡುವುದರ ಮೂಲಕ ಮತದಾರರನ್ನು ಸೆಳೆಯುವ ತಂತ್ರವನ್ನು ರೂಪಿಸಲಾಗುವುದು ಎಂದರು.

ಪ್ರಾದೇಶಿಕ ಪಕ್ಷಗಳಿಗೆ ದಕ್ಷಿಣ ಭಾರತದಲ್ಲಿ ಭಾರಿ ಬೇಡಿಕೆಯಿದ್ದು ರಾಷ್ಟ್ರೀಯ ಪಕ್ಷಗಳ ರಾಜಕರಣದಿಂದ ಜನ ಬೇಸತ್ತಿದ್ದಾರೆ ಎಂದ ಅವರು ರಾಷ್ಟ್ರೀಯ ಪಕ್ಷಗಳು ಕೇವಲ ಹಗರಣಗಳಲ್ಲಿ ತಲ್ಲೀನರಾಗಿದ್ದು ಜನರ ಸಮಸ್ಯೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ ಭ್ರಷ್ಟಚಾರದಲ್ಲಿ ಕಾಲಕಳೆಯುತ್ತಿವೆ ಎಂದು ಆರೋಪಿಸಿದರು.

ಉತ್ತರಕನ್ನಡ ಜಿಲ್ಲೆಯ ಇಬ್ಬರು ಜೆ.ಡಿ.ಎಸ್. ಶಾಸಕರು ಪಕ್ಷವನ್ನು ತೊರೆದು ಬೇರೆ ಪಕ್ಷ ಸೇರಿದ್ದರ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಬಿಟ್ಟವರು ತಮ್ಮ ಶಾಸಕತ್ವವನ್ನು ದುರುಪಯೋಗ ಮಾಡಿದ್ದಾರೆ. ಪಕ್ಷದಿಂದ ಗರಿಷ್ಠಮಟ್ಟದ ಲಾಭಗಳಿಸಿಕೊಂಡ ಅವರು ಪಕ್ಷವನ್ನು ಬಿಟ್ಟಿದ್ದು ಅವರ ಮನಸಾಕ್ಷಿಯನ್ನು ತೋರಿಸುತ್ತದೆ. ಇದಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆ.ಡಿ.ಎಸ್ ಸೇರುತ್ತಾರೆಂಬ ಪ್ರಶ್ನೆಗೆ, ಇದು ನಮ್ಮ ಗಮನಕ್ಕೆ ಬಂದಿಲ್ಲ. ಇದನ್ನು ಪಕ್ಷದ ಮುಖಂಡರು ನಿರ್ಣಯಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ವೀಕ್ಷಕರಾದ ಯೋಗೇಂದ್ರ, ಬಿ.ಆರ್. ನಾಯ್ಕ, ತ್ರೀವೇಣಿ ಆನಂದ ಗೌಡ, ಗಣಪಯ್ಯ ಗೌಡ, ಮುಖಂಡರಾದ ಇನಾಯತುಲ್ಲಾ ಶಾಬಂದ್ರಿ, ಎಂ.ಡಿ.ನಾಯ್ಕ, ಡಾ.ಫಾರೂಖ್, ರಾಜೇಶ್ವರಿ ಹೆಗಡೆ, ಜೆ.ಎನ್.ಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X