Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನಿಲ್ಲಿಸಲು...

ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನಿಲ್ಲಿಸಲು ಸರಕಾರಿ ಆದೇಶದ ವಿರುದ್ಧ ಡಿವೈಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 May 2017 10:27 PM IST
share
ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನಿಲ್ಲಿಸಲು ಸರಕಾರಿ ಆದೇಶದ ವಿರುದ್ಧ  ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು, ಮೇ 25: ಖಾಸಗಿ ಶಿಕ್ಷಣ ಸಂಸ್ಥಗಳು ಪೋಷಕರಿಂದ ಸುಲಿಗೆ ಮಾಡಲು ಪ್ರೋತ್ಸಾಹ ನೀಡುವುದಕ್ಕಾಗಿ ಜಿಲ್ಲಾಡಳಿತ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಕಲಿಕೆಗೆ ತಡೆ ನೀಡುತ್ತಿದೆ ಎಂದು ಡಿವೈಎಫ್‌ಐ ಮಾಜಿ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ. 

    ಅವರು ಇಂದು ಸರಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ನಿಲ್ಲಿಸಲು ಆದೇಶ ನೀಡಿದ ಸರಕಾರದ ನೀತಿಯನ್ನು ಖಂಡಿಸಿ ಮಂಗಳೂರಿನ ಕಸಬ ಬೆಂಗರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಡಿವೈಎಫ್‌ಐ ಬೆಂಗರೆ ಗ್ರಾಮ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸರಕಾರಿ ಶಾಲೆಗಳಲ್ಲಿ ಕನ್ನಡ ಕಲಿಕೆ ಅನಿವಾರ್ಯವೂ, ಕಡ್ಡಾಯವೂ ಆಗಬಾರದು. ಕಲಿಕಾ ಮಾಧ್ಯಮ ಆಯ್ಕೆಯ ವಿಷಯವಾಗಬೇಕು ಎಂದ ಅವರು, ಸರಕಾರಿ ಶಾಲೆಯನ್ನು ಬಲಪಡಿಸಬೇಕೇ ಹೊರತು ದುರ್ಬಲಗೊಳಿಸಲು ಬಿಡುವುದಿಲ್ಲ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು.

ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ, ಜಿಲ್ಲಾಡಳಿತ ಮಾದರಿಯಾಗಿ ಸ್ವೀಕರಿಸಬೇಕಾಗಿದ್ದ ಸರಕಾರಿ ಶಾಲೆಯೊಂದು ಜಿಲ್ಲಾಡಳಿತದ ಕೆಂಗಣ್ಣಿಗೆ ಗುರಿಯಾಗಿರುವುದು ವಿಪರ್ಯಾಸ. ಬೆಂಗರೆ ಕಸಬದ ಸರಕಾರಿ ಶಾಲೆಯ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಿರುವುದರಿಂದಾಗಿ ಎಲ್.ಕೆ.ಜಿ ಯಿಂದ ಎರಡನೆ ತರಗತಿ ವರೆಗೆ 360 ಮಂದಿ ಬಡವರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಕನ್ನಡ ಶಾಲೆಗೆ ಬರುವ ಅನುದಾನವನ್ನು ಬಳಸಿಕೊಂಡು, ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವ ಆಂಗ್ಲ ಮಾಧ್ಯಮ ಶಾಲೆ ಮುಚ್ಚುವ ಅಗತ್ಯತೆಯನ್ನು ಅವರು ಪ್ರಶ್ನಿಸಿದರು.

ಖಾಸಗಿ ಶಾಲೆಗಳ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗದ ಜಿಲ್ಲಾಧಿಕಾರಿಗಳು ಎಸ್‌ಡಿಎಂಸಿ ಸದಸ್ಯರ ವಿರುದ್ಧ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳ ಹೇಳಿಕೆ ಇದೇ ಸಂದರ್ಭದಲ್ಲಿ ಟೀಕಿಸಿದರು. ಆಂಗ್ಲ ಮಾಧ್ಯಮ ಶಿಕ್ಷಣವನ್ನು ನಿಲ್ಲಿಸಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಚ್ಚರಿಕೆ ನೀಡಿದರು.

ಕಸಬ ಬೆಂಗರೆ ಜಮಾತ್ ಅಧ್ಯಕ್ಷ ಅಬ್ದುಲ್ ಹಮೀದ್, ಸಮಾಜ ಸೇವಕಿ ಶಮೀಮ್ ತಣ್ಣೀರುಬಾವಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಖೈರುನ್ನಿಸಾ, ಬೆಂಗರೆ ಡಿವೈಎಫ್‌ಐ ಅಧ್ಯಕ್ಷ ಎ.ಬಿ.ನೌಷಾದ್, ಕಾರ್ಯದರ್ಶಿ ರಿಯಾಝ್ ಬೆಂಗರೆ, ನಾಸಿರ್ ಬಾಸ್, ನೌಷಾದ್, ಪಿ.ಜಿ.ರಫೀಕ್, ಅಬ್ದುಲ್ ವಹಾಬ್ ಅಶ್ರಫ್ ಅಸ್ಸು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X