Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಲ್ಗುಣಿ ನೀರು ಕಲುಷಿತಗೊಳಿಸುವವರ...

ಫಲ್ಗುಣಿ ನೀರು ಕಲುಷಿತಗೊಳಿಸುವವರ ವಿರುದ್ಧ ಕ್ರಮ

ಮಂಗಳೂರು ತಾಪಂ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ25 May 2017 11:58 PM IST
share
ಫಲ್ಗುಣಿ ನೀರು ಕಲುಷಿತಗೊಳಿಸುವವರ ವಿರುದ್ಧ ಕ್ರಮ

ಮಂಗಳೂರು, ಮೇ 25: ಗುರುಪುರದ ಫಲ್ಗುಣಿ ನದಿಗೆ ಕಟ್ಟಲಾಗಿರುವ ಮರವೂರು ಡ್ಯಾಂ ನೀರು ಕಲುಷಿತಗೊಳ್ಳಲು ಕಾರಣರಾದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳು ವಂತೆ ಒತ್ತಾಯಿಸಿ ಇಂದು ನಡೆದ ಮಂಗಳೂರು ತಾಪಂ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳ ಲಾಯಿತು. ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಫಲ್ಗುಣಿ ನದಿ ನೀರು ಕಪ್ಪಾಗಿರುವ ಬಗ್ಗೆ ಕಾಲಮಿತಿಯೊಳಗೆ ಸಮರ್ಪಕ ವರದಿ ಸಲ್ಲಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರ ಸಂಬಂಧಿತ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಇತ್ತೀಚೆಗೆ ಸಭೆ ಕರೆದು ಸೂಚಿಸಿದ್ದಾರೆ. ತಪ್ಪು ಮಾಡಿದವರ ಮೇಲೆ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಮಹದೇವಯ್ಯ ಭರವಸೆ ನೀಡಿದ್ದರು.

ಆದರೆ ಮರವೂರು ನೀರು ಮತ್ತೆ ಕಪ್ಪಾಗಿದೆ. ಇಲ್ಲಿನ ನೀರು ಪ್ರಾಣಿಗಳು ಉಪಯೋಗಿಸಲು ಕೂಡ ಯೋಗ್ಯವಾಗಿಲ್ಲ ಎನ್ನುವುದು ವೈಜ್ಞಾನಿಕ ವರದಿ ತಿಳಿದು ಬಂದಿದೆ. ಸುಮಾರು 50 ಸಾವಿರ ಜನರ ಬಳಕೆಗೆ 43 ಕೋಟಿ ರೂ. ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಸಲಾಗಿದೆ. ಆದ್ದ ರಿಂದ ಈ ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಬೇಕೆಂದು ಮಳವೂರು ಗ್ರಾಪಂ ಅಧ್ಯಕ್ಷರು ಆಗ್ರಹಿಸಿದರು.

ಗುರುಪುರ ಸೇತುವೆಗೆ ತ್ಯಾಜ್ಯ ಎಸೆಯುತ್ತಿ ರುವುದನ್ನು ತಪ್ಪಿಸಲು ಅಂತಹವರನ್ನು ಪತ್ತೆ ಹಚ್ಚಲು ಸೇತುವೆ ಸಮೀಪ ಸಿಸಿಟಿವಿ ಕ್ಯಾಮರಾ ಅಳವ ಡಿಸುವಂತೆ ಸದಸ್ಯರು ಸಭೆಯಲ್ಲಿ ಒತ್ತಾಯಿಸಿದರು.

ಗ್ರಾಮ ಲೆಕ್ಕಿಗರ ಕೊರತೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳ ಮಕ್ಕಳಿಗೆ ಆದಾಯ, ಜಾತಿ ಪ್ರಮಾಣ ಪತ್ರ ದಾಖಲೆ ಪಡೆಯಲು ಸಮಸ್ಯೆ ಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಸದಸ್ಯರೊಬ್ಬರ ಆಗ್ರಹಕ್ಕೆ ಪ್ರತಿಕ್ರಿಯಿಸಿದರು. ಗ್ರಾಮ ಲೆಕ್ಕಿಗರು ಇಲ್ಲದೆ ಇರುವ ಕಡೆ ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸ ಲಾಗುವುದು. ಅಲ್ಲದೆ ಶಾಲಾ-ಕಾಲೇಜು ಮಕ್ಕ ಳಿಗೆ ಅವಶ್ಯ ಪ್ರಮಾಣಪತ್ರ ವಿತರಣೆಗೆ ಆದ್ಯತೆ ನೀಡ ಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ಇದೇ ಸಂದರ್ಭ ಸರಕಾರಿ ಭೂಮಿಗಾಗಿ ಗ್ರಾಮೀಣ ಪ್ರದೇಶದಲ್ಲಿ ಕಲಂ 94 ಸಿಸಿ ಹಾಗೂ ನಗರ ಪ್ರದೇಶದಲ್ಲಿ ಕಲಂ 94 ಸಿಸಿ ಅಡಿ ಸಾರ್ವ ಜನಿಕರು ಅರ್ಜಿ ಸಲ್ಲಿಸಲು ಇರುವ ಅವಧಿ ಯನ್ನು ಎರಡು ತಿಂಗಳು ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ಮಹದೇವಯ್ಯ ಹೇಳಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್ ಪೂಜಾರಿ, ಸ್ಥಾಯಿ ಸಮಿತಿಯ ಅಧ್ಯಕ್ಷೆ ರೀಟಾ, ಸದಾನಂದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X