ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಮರಣಾ ದಿನಾಚರಣೆ

ಮಂಗಳೂರು, ಮೇ 26: ಕನ್ನಡ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಆಶ್ರಯದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತ್- ಸಂಸ್ಮರಣಾ ದಿನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕದ್ರಿ ಕಂಬಳದ ನವೋದಯ ಮಹಿಳಾ ಮಂಡಳಿ ಸಭಾಂಗಣದಲ್ಲಿ ಜರಗಿದ ಈ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮಾಜಿ ರಾಜ್ಯಾಧ್ಯಕ್ಷೆ ಜಯಲಕ್ಷ್ಮಿಬಿ.ಆರ್. ಉದ್ಘಾಟಿಸಿದರು.
ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಪ್ರೊ. ಕೃಷ್ಣಮೂರ್ತಿ‘ಕನ್ನಡ ಸಾಹಿತ್ಯ ಪರಿಷತ್ ಬೆಳೆದು ಬಂದ ದಾರಿ’ ಹಾಗೂ ಉಪನ್ಯಾಸಕ ರಘು ಇಡ್ಕಿದು ‘ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ದೇವಕಿ ಅಚ್ಯುತ, ಡಾ. ಪದ್ಮನಾಭ ಭಟ್ ಎಕ್ಕಾರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಶೆಟ್ಟಿ ಸ್ವಾಗತಿಸಿದರು.
Next Story





