Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್‌ಡಿಎ ಸರಕಾರ ಜನರ ಹಕ್ಕುಗಳನ್ನು ದಮನ...

ಎನ್‌ಡಿಎ ಸರಕಾರ ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ: ಸಿದ್ದರಾಮಯ್ಯ

ಎನ್‌ಡಿಎ ಸರಕಾರದ ಮೂರು ವರ್ಷದ ಸಾಧನೆ ಶೂನ್ಯ

ವಾರ್ತಾಭಾರತಿವಾರ್ತಾಭಾರತಿ26 May 2017 8:26 PM IST
share
ಎನ್‌ಡಿಎ ಸರಕಾರ ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು, ಮೇ. 26: ಕೇಂದ್ರ ಎನ್‌ಡಿಎ ಸರಕಾರ ಕಳೆದ ಯುಪಿಎ ಸರಕಾರದ ಯೋಜನೆಗಳ ಹೆಸರುಗಳನ್ನೆ ಬದಲಾಯಿಸಿ ಇವುಗಳು ನಮ್ಮ ಹೊಸ ಯೋಜನೆಗಳು ಎಂದು ಸುಳ್ಳು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ.

ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಮೋದಿ ಸರಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರಕಾರದ ವೈಫಲ್ಯಗಳನ್ನು ತಿಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಏರ್ಪಡಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಯುಪಿಎ ಆಡಳಿತದಲ್ಲಿದ್ದಾಗ ನಿರ್ಮಲ್ ಯೋಜನೆ, ನರ್ಮ್ ಯೋಜನೆ, ಇಂದಿರಾ ಗಾಂಧಿ ಆವಾಸ್ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರಕಾರ ನರ್ಮ್ ಯೋಜನೆ ಹೆಸರನ್ನು ಬದಲಾಯಿಸಿ ಅಮೃತ್ ಯೋಜನೆ, ನಿರ್ಮಲ್ ಯೋಜನೆ ಹೆಸರನ್ನು ಬದಲಾಯಿಸಿ ಸ್ವಚ್ಛ ಭಾರತ್ ಯೋಜನೆ ಎಂಬ ಹೆಸರುಗಳಿಂದ ಕರೆದರೆ ವಿನಹ ಎನ್‌ಡಿಎ ಸರಕಾರ ಮೂರು ವರ್ಷಗಳಲ್ಲಿ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದರು.

ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ನಿರ್ದಿಷ್ಟವಾದಂತಹ ಬಟ್ಟೆ, ಆಹಾರ ತಿನ್ನಬೇಕೆಂದು ಹೇಳುವ ಮೂಲಕ ಜನರ ಹಕ್ಕುಗಳನ್ನು ದಮನ ಮಾಡುವ ಕೆಲಸ ಮಾಡಲಾಗುತ್ತಿದೆ. ಇದರಿಂದ, ಸಮಾಜದಲ್ಲಿ ಸಾಮರಸ್ಯ ಹಾಳಾಗುತ್ತಿದೆ, ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು.

ಮೋದಿ ಅವರು ತಮ್ಮ ವೀರಾವೇಶದ ಭಾಷಣಗಳಲ್ಲಿ ಜನರಲ್ಲಿ ಆಶಾಗೋಪುರಗಳನ್ನು ಕಟ್ಟಲು ಹಾಗೂ ನಿರೀಕ್ಷೆಗಳನ್ನು ಹುಟ್ಟಿಸಲು ಪ್ರಯತ್ನಿಸಿರು ವುದನ್ನು ಹೊರತುಪಡಿಸಿದರೆ ಯಾವುದೇ ಸಾಧನೆ ಮಾಡಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಯುವ ಜನರಲ್ಲಿ ಆಸೆ ಮೂಡಿಸಿದ್ದ ಮೋದಿ, ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗದ ಕಾರಣ ಜನರಲ್ಲಿ ನಿರಾಸೆ ಉಂಟಾಗಿದೆ ಎಂದು ಹೇಳಿದರು.

14ನೆ ಹಣಕಾಸು ಆಯೋಗದ ನೀತಿಯನ್ವಯ ರಾಜ್ಯಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಒಂದು ಕೈಯಲ್ಲಿ ಅನುದಾನ ಹೆಚ್ಚಿಗೆ ಮಾಡಿ ಮತ್ತೊಂದು ಕೈಯಲ್ಲಿ ಅಂದರೆ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಅನುದಾನದಲ್ಲಿ ಅರ್ಧಕ್ಕಿಂತ ಮೊತ್ತವನ್ನು ಕಡಿತ ಮಾಡಲಾಗಿದೆ ಎಂದು ಟೀಕಿಸಿದರು.

ನರೇಂದ್ರ ಮೋದಿ ಪ್ರಧಾನಿ ಆಗುವ ಮೊದಲು ಬಿಜೆಪಿ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಹೊರ ದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುತ್ತೇನೆ. ಹಾಗೂ ಆ ಹಣದಲ್ಲಿ ಪ್ರತಿ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿದರೂ ಇವರಿಂದ ಕಪ್ಪು ಹಣವನ್ನು ತರಲಾಗಲಿಲ್ಲ ಎಂದು ವ್ಯಂಗ್ಯವಾಡಿದರು.

ನೋಟ್ ಬ್ಯಾನ್‌ನಿಂದ ಭಯೋತ್ಪಾದನೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂಬ ಆಶ್ವಾಸನೆ ನೀಡಿದ್ದರು. ಆದರೆ, ಈ ಎರಡಕ್ಕೂ ಕಡಿವಾಣ ಬೀಳದೆ ಬಡವರು, ರೈತರು ಕಂಗಾಲಾದರು. ಅಲ್ಲದೆ, ನೋಟ್ ಬ್ಯಾನ್‌ನಿಂದ ಎಷ್ಟು ಹಣ ಸಂಗ್ರಹವಾಯಿತು ಎಂದು ಇಲ್ಲಿಯವರೆಗೆ ಮಾಹಿತಿ ನೀಡಿಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ಭೀಕರ ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು 2 ಬಾರಿ ಭೇಟಿ ಮಾಡಿ ಮನವಿ ಮಾಡಿದರೂ ಅದಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ತರಲು ಪ್ರಯತ್ನಿಸಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರಕ್ಕೆ 3 ವರ್ಷ 30 ವೈಫಲ್ಯಗಳು ಎಂಬ ಸಾಕ್ಷ ಚಿತ್ರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು

 ‘ಮೋದಿ, ತಮ್ಮ ವೀರಾವೇಶದ ಭಾಷಣಗಳಲ್ಲಿ ಜನರಲ್ಲಿ ಆಶಾಗೋಪುರಗಳನ್ನು ಕಟ್ಟಲು ಹಾಗೂ ನಿರೀಕ್ಷೆಗಳನ್ನು ಹುಟ್ಟಿಸಲು ಪ್ರಯತ್ನಿಸಿರುವು ದನ್ನು ಹೊರತುಪಡಿಸಿದರೆ ಯಾವುದೇ ಸಾಧನೆ ಮಾಡಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಯುವ ಜನರಲ್ಲಿ ಆಸೆ ಮೂಡಿಸಿದ್ದ ಮೋದಿ, ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗಿಲ್ಲ.’
-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X