ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯ

ಕಾಸಾರಗೋಡು, ಮೇ 26: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕಾಸರಗೋಡು ಹೊಸಬಸ್ ನಿಲ್ದಾಣ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಮೊಗ್ರಾಲ್ ಪುತ್ತೂರು ಕಲ್ಲಂಗೈಯ ಮುಹಮ್ಮದ್ ( 22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.
ಅಪಘಾತದ ಬಳಿಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದು, ಪೊಲೀಸರು ಮತ್ತು ನಾಗರಿಕರು ಬೆನ್ನಟ್ಟಿ ಮೊಗ್ರಾಲ್ ಪುತ್ತೂರಿನಿಂದ ಲಾರಿಯನ್ನು ವಶಕ್ಕೆ ತೆಗೆದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಪಘಾತದ ಬಳಿಕ ರಾಷ್ಟೀಯ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





